ಹರಿಯಾಣ: ಚಲಿಸುವ ಆಟೋದಿಂದ ಮಗು ಹೊರಗೆ ಹಾಕಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಚಲಿಸುವ ಆಟೋದಿಂದ 9 ತಿಂಗಳವನ್ನು ಹೊರಗೆ ಹಾಕಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಹೀನ ಕೃತ್ಯವೊಂದು ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಗುರುಗ್ರಾಮ: ಚಲಿಸುವ ಆಟೋದಿಂದ 9 ತಿಂಗಳವನ್ನು ಹೊರಗೆ ಹಾಕಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಹೀನ ಕೃತ್ಯವೊಂದು ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ. 
ಮೇ.29 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಗಂಡನೊಂದಿಗೆ ಜಗಳ ಮಾಡಿಕೊಂಡಿದ್ದ ಮಹಿಳೆಯೊಬ್ಬರು ಮಧ್ಯರಾತ್ರಿ 9 ತಿಂಗಳ ಹೆಣ್ಣು ಮಗುವಿನೊಂದಿಗೆ ಆಟೋದಲ್ಲಿ ತನ್ನ ತಾಯಿ ಮನೆಗೆ ಹೊರಟಿದ್ದಳು. 
ಆಟೋದಲ್ಲಿ ಮೂವರು ಪುರುಷರು ಕುಳಿತಿದ್ದರು. ಆಟೋ ಸ್ವಲ್ಪ ದೂರ ತೆರಳುತ್ತಿದ್ದಂತೆ ಕಾಮುಕರು ಆಕೆಯ ಮೇಲೆ ದೌರ್ಜನ್ಯವೆಸಗಲು ಆರಂಭಿಸಿದ್ದಾರೆ. ಈ ವೇಳೆ ಮಹಿಳೆ ಕೂಗಾಡಿದ್ದಾಗ ಮಗು ಅಳಲು ಆರಂಭಿಸಿದೆ. ನಂತರ ಕಾಮುಕರು ಮಗುವನ್ನು ಆಟೋದಿಂದ ಹೊರಗೆ ಹಾಕಿ ಮಹಿಳೆ ಮೇಲೆ ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದಾರೆಂದು ತಿಳಿದುಬಂದಿದೆ. 
ಮಗುವಿಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ದೆಹಲಿ-ಗುರುಗಾಂವ್ ಎಕ್ಸ್ ಪ್ರೆಸ್'ವೇ ಗೆ ಹತ್ತಿರವಿರುವ ಖಾಂದಾ ರಸ್ತೆಯಲ್ಲಿ ಘಟನೆ ನಡೆದಿತ್ತು ಎಂದು ಮಹಿಳೆ ತನ್ನ ದೂರಿನಲ್ಲಿ ಹೇಳಿಕೊಂಡಿದ್ದಾರೆ.
ಆರೋಪಿಗಳ ವಿರುದ್ಧ ಕೊಲೆ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 
ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.        

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com