ಗಡಿಯಲ್ಲಿ ಪಾಕ್ ಉದ್ಧಟತನ ಮುಂದುವರೆಸಿದ್ದೇ ಆದರೆ ಸೇನೆಯಿಂದ ದಿಟ್ಟ ಉತ್ತರ: ಡಿಜಿಎಂಒ

ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ತನ್ನ ಉದ್ಧಟತನವನ್ನು ಮುಂದುವರೆಸಿದ್ದೇ ಆದರೆ, ಭಾರತೀಯ ಸೇನೆ ದಿಟ್ಟ ಉತ್ತರ ನೀಡಲಿದೆ ಎಂದು ಮಹಾ ನಿರ್ದೇಶನಾಲಯ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ತನ್ನ ಉದ್ಧಟತನವನ್ನು ಮುಂದುವರೆಸಿದ್ದೇ ಆದರೆ, ಭಾರತೀಯ ಸೇನೆ ದಿಟ್ಟ ಉತ್ತರ ನೀಡಲಿದೆ ಎಂದು ಮಹಾ ನಿರ್ದೇಶನಾಲಯ (ಡಿಜಿಎಂಒ) ಲೆಫ್ಟಿನೆಂಟ್ ಜನರಲ್ ಎ.ಕೆ.ಭಟ್ ಅವರು ಸೋಮವಾರ ಹೇಳಿದ್ದಾರೆ. 
ಗಡಿ ನಿಯಂತ್ರಣ ರೇಖೆ ಬಳಿಯಿರುವ ಪರಿಸ್ಥಿತಿ ಕುರಿತಂತೆ ಸಭೆ ನಡೆಸಿದ ಬಳಿಕ ಮಾತನಾಡಿರುವ ಅವರು, ದೇಶದ ಶಾಂತಿ ಕಾಪಾಡಲು ಭಾರತೀಯ ಸೇನೆ ಬದ್ಧವಾಗಿತ್ತು. ಶಾಂತಿಗೆ ಧಕ್ಕೆ ತರುವಂತಹ ಯಾವುದೇ ಪ್ರಯತ್ನಗಳನ್ನೂ ನಾವು ಸಹಿಸುವುದಿಲ್ಲ. ಗಡಿ ನುಸುಳಲು ಪಾಕಿಸ್ತಾನ ಯಾವುದೇ ರೀತಿ ಪ್ರಯತ್ನಗಳನ್ನು ಮಾಡಿದರೂ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡಲಿದೆ ಎಂದು ಹೇಳಿದ್ದಾರೆ. 
ಇದೇ ವೇಳೆ ಗಡಿಯಲ್ಲಿ ಭಾರತೀಯ ಸೇನೆ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು, ನಾಗರಿಕರನ್ನು ಹತ್ಯೆ ಮಾಡುತ್ತಿದೆ ಎಂಬ ಪಾಕಿಸ್ತಾನದ ಆರೋಪ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಭಾರತೀಯ ಸೇನೆ ವೃತ್ತಿಪರ ಪಡೆಯಾಗಿದ್ದು, ಯಾವುದೇ ಕಾರಣಕ್ಕೂ ನಾಗರಿಕರಿಗೆ ತೊಂದರೆಯನ್ನುಂಟು ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com