ಕಾಶ್ಮೀರ: ಸೇನಾ ಪಡೆ-ಕಲ್ಲು ತೂರಾಟಗಾರರ ನಡುವೆ ಘರ್ಷಣೆ, ಓರ್ವ ವಿದ್ಯಾರ್ಥಿ ಸಾವು

ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಸೇನಾ ಪಡೆ ಹಾಗೂ ಕಲ್ಲು ತೂರಾಟಗಾರರ ನಡುವೆ ಘರ್ಷಣೆ ಏರ್ಪಟ್ಟಿದ್ದು, ಘರ್ಷಣೆಯಲ್ಲಿ ಓರ್ವ ವಿದ್ಯಾರ್ಥಿ ಮೃತಪಟ್ಟು 10 ನಾಗರಿಕರಿಗೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಶ್ರೀನಗರ: ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಸೇನಾ ಪಡೆ ಹಾಗೂ ಕಲ್ಲು ತೂರಾಟಗಾರರ ನಡುವೆ ಘರ್ಷಣೆ ಏರ್ಪಟ್ಟಿದ್ದು, ಘರ್ಷಣೆಯಲ್ಲಿ ಓರ್ವ ವಿದ್ಯಾರ್ಥಿ ಮೃತಪಟ್ಟು 10 ನಾಗರಿಕರಿಗೆ ಗಾಯವಾಗಿರುವ ಘಟನೆ ಮಂಗಳವಾರ ನಡೆದಿದೆ. 
ನಿನ್ನೆ ಸಂಜೆ ಗನೌಪೊರ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿದುಬಂದ ಹಿನ್ನಲೆಯಲ್ಲಿ ಸೇನಾ ಪಡೆ ಕಾರ್ಯಾಚರಣೆಗೆ ಮುಂದಾಗಿತ್ತು. ಈ ವೇಳೆ ಸೇನಾ ಪಡೆ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮ ಸ್ಥಳದಲ್ಲಿ ಘರ್ಷಣೆ ಏರ್ಪಟ್ಟಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. 
ಘರ್ಷಣೆ ಹತ್ತಿಕ್ಕುವ ಸಲುವಾಗಿ ಸೇನಾ ಪಡೆ ಅಶ್ರು ವಾಯು ಪ್ರಯೋಗ ಮಾಡಿತ್ತು. ಸೇನಾ ಪಡೆ ಗುಂಡು ಹಾರಿಸದಂತೆ ಎಷ್ಟೇ ಪ್ರಯತ್ನಗಳನ್ನು ಮಾಡಿದರು ಕೆಲ ಕಲ್ಲು ತೂರಾಟಗಾರರು ತಮ್ಮ ಉದ್ಧಟತನವನ್ನು ಮುಂದುವರೆಸುತ್ತಿರುತ್ತಾರೆ. ಹೀಗಾಗಿ ಗುಂಡಿನ ದಾಳಿ ನಡೆಸಲೇಬೇಕಾದ ಪರಿಸ್ಥಿತಿ ಎದುರಾಗುತ್ತದೆ ಎಂದು ಅಧಿಕಾರಿ ತಿಳಿಸಿದ್ದಾರೆ. 
ಘರ್ಷಣೆ ವೇಳೆ ಮೃತಪಟ್ಟ ವಿದ್ಯಾರ್ಥಿಯನ್ನು ಅದಿಲ್ ಫರೂಖ್ ಎಂದು ಹೇಳಲಾಗುತ್ತಿದೆ. ಗಾಯಗೊಂಡ ನಾಗರಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com