ಶಜಪುರ: ಮಧ್ಯಪ್ರದೇಶದ ಶಾಜಪುರ ಜಿಲ್ಲೆಯಲ್ಲಿ ಅಪಘಾತ ಸಂಭವಿಸಿದ್ದು, ಕಾರು ಮಗುಚಿ ಬಿದ್ದ ಪರಿಣಾಮ 10 ಮಂದಿ ಪೊಲೀಸರಿಗೆ ಗಾಯವಾಗಿರುವ ಘಟನೆ ಶುಕ್ರವಾರ ನಡೆದಿದೆ.
10 ಮಂದಿ ಪೊಲೀಸರು ಕುಳಿತಿದ್ದ ಕಾರೊಂದು ತುಕ್ರಾನಾ ರಾಷ್ಟ್ರೀಯ ಹೆದ್ದಾರಿ-3 ರಲ್ಲಿ ಹೋಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಇದ್ದಕ್ಕಿದ್ದಂತೆ ಮಗುಚಿ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ 10 ಮಂದಿ ಪೊಲೀಸರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಗಾಯಗೊಂಡ ಪೊಲೀಸರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಾಯಗೊಂಡಿರುವ 10 ಮಂದಿ ಪೊಲೀಸರ ಪೈಕಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.