ಶಾಂತಿಗಾಗಿ ಮಧ್ಯಪ್ರದೇಶ ಸಿಎಂ ಉಪವಾಸ, ನಾಳೆ ರೈತರೊಂದಿಗೆ ಬಹಿರಂಗ ಚರ್ಚೆ

ಮಂಡಸೌರ್ ರೈತರ ಮೇಲೆ ಗೋಲಿಬಾರ್ ಪ್ರಕರಣದ ನಂತರ ಮಧ್ಯಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು,...
ಶಿವರಾಜ್ ಸಿಂಗ್ ಚೌವ್ಹಾಣ್
ಶಿವರಾಜ್ ಸಿಂಗ್ ಚೌವ್ಹಾಣ್
ಭೋಪಾಲ್: ಮಂಡಸೌರ್ ರೈತರ ಮೇಲೆ ಗೋಲಿಬಾರ್ ಪ್ರಕರಣದ ನಂತರ ಮಧ್ಯಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ರಾಜ್ಯದಲ್ಲಿ ಶಾಂತಿಗಾಗಿ ತಾವು ಉಪವಾಸ ಮಾಡುವುದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಅವರು ಶುಕ್ರವಾರ ಹೇಳಿದ್ದಾರೆ.
ಇದೇ ವೇಳೆ ನಾಳೆ ಬೆಳಗ್ಗೆ 11ಗಂಟೆಯಿಂದ ದಸರಾ ಮೈದಾನದಲ್ಲಿ ಪ್ರತಿಭಟನಾ ನಿರತ ರೈತರೊಂದಿಗೆ ಬಹಿರಂಗ ಚರ್ಚೆ ನಡೆಸುವುದಾಗಿ ಸಿಎಂ ಶಿವರಾಜ್ ಸಿಂಗ್ ಚೌವ್ಹಾಣ್ ಅವರು ತಿಳಿಸಿದ್ದಾರೆ.
ನಾನು ನನ್ನ ಮನೆಯಲ್ಲಿ ಕುಳಿತುಕೊಳ್ಳುವುದಿಲ್ಲ. ಬೆಳಗ್ಗೆಯಿಂದ ಸಂಜೆಯವರೆಗೆ ದಸರಾ ಮೈದಾನದಲ್ಲಿ ಕುಳಿತು ರೈತರೊಂದಿಗೆ ಅವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತೇನೆ ಎಂದು ಸಿಎಂ ಹೇಳಿದ್ದಾರೆ.
ಸಾಲ ಮನ್ನಾ ಮಾಡುವಂತೆ ಮತ್ತು ಬೆಳೆಗೆ ಬೆಂಬಲ ಬೆಲೆ ಘೋಷಿಸುವಂತೆ ಒತ್ತಾಯಿಸಿ ಕಳೆದ ಒಂದು ವಾರದಿಂದ ಮಧ್ಯಪ್ರದೇಶ ರೈತರು ಉಗ್ರ ಹೋರಾಟ ನಡೆಸುತ್ತಿದ್ದು, ಪರಿಸ್ಥಿತಿ ನಿಯಂತ್ರಿಸುವುದಕ್ಕಾಗಿ ಕಳೆದ ಮಂಗಳವಾರ ಪೊಲೀಸರು ನಡೆಸಿದ ಗೋಲಿಬಾರ್ ನಲ್ಲಿ ಐವರು ರೈತರು ಮೃತಪಟ್ಟಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com