ಉಗ್ರರನ್ನು ಹತ್ಯೆ ಮಾಡಿದ ಬಳಿಕ ಸ್ಥಳದಲ್ಲಿ ಕಾರ್ಯಾಚರಣೆಯನ್ನು ಮತ್ತೆ ಮುಂದುವರೆಸಿದ್ದ ಸೇನಾ ಪಡೆ ಉಗ್ರರು ಬಳಸಿದ್ದ ಔಷಧಿಗಳು, ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿತ್ತು. ಉಗ್ರರು ಬಳಸಿದ್ದ ವಸ್ತುಗಳ ಮೇಲೆ ಪಾಕಿಸ್ತಾನ ರಾಷ್ಟ್ರದ ಗುರುತುಗಳಿರುವುದು ಪತ್ತೆಯಾಗಿದ್ದು, ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆಂದು ತಿಳಿದುಬಂದಿದೆ.