ಕಾಂಗ್ರೆಸ್ ಸ್ಥಾಪನೆಯಾಗಿದ್ದು ಸ್ವಾತಂತ್ರ್ಯ ಪಡೆಯುವ ಉದ್ದೇಶಕ್ಕಾಗಿ, ಆದ್ದರಿಂದಲೇ ಸ್ವಾತಂತ್ರ್ಯ ಬಂದ ನಂತರ ಮಹಾತ್ಮ ಗಾಂಧಿ ಕಾಂಗ್ರೆಸ್ ನ್ನು ವಿಸರ್ಜನೆ ಮಾಡಲು ಬಯಸಿದ್ದ ಮಹಾತ್ಮ ಗಾಂಧಿ ಬುದ್ಧಿವಂತ ಬನಿಯಾ ಆಗಿದ್ದರು. ಸ್ವಾತಂತ್ರ್ಯಾ ನಂತರವೂ ಕಾಂಗ್ರೆಸ್ ಅಸ್ತಿತ್ವದಲ್ಲಿದ್ದರೆ ಅದರ ಪರಿಣಾಮಗಳು ಏನಾಗಬಹುದು ಎಂಬುದರ ಅರಿವು ಮಹಾತ್ಮ ಗಾಂಧಿ ಅವರಿಗಿತ್ತು, ಹಾಗಾಗಿಯೇ ಅವರು ಕಾಂಗ್ರೆಸ್ ವಿಸರ್ಜನೆಯಾಗಬೇಕೆಂದಿದ್ದರು ಎಂದು ಅಮಿತ್ ಶಾ ಹೇಳಿದ್ದರು.