ಸಾಂದರ್ಭಿಕ ಚಿತ್ರ
ದೇಶ
ಒಡಿಶಾದಲ್ಲಿ ಭೀಕರ ಅಪಘಾತ, 8 ಮಂದಿ ಸ್ಥಳದಲ್ಲೇ ಸಾವು
ಒಡಿಶಾದ ಜಗತ್ ಸಿಂಗ್ ಪುರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 55ರಲ್ಲಿ ಶನಿವಾರ ಲಾರಿ ಮತ್ತು ಆಟೋರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ...
ಜಗತ್ ಸಿಂಗ್ ಪುರ: ಒಡಿಶಾದ ಜಗತ್ ಸಿಂಗ್ ಪುರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 55ರಲ್ಲಿ ಶನಿವಾರ ಲಾರಿ ಮತ್ತು ಆಟೋರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರು ಸುಧೀರ್ ಬೆಹೆರಾ, ಅವರ ಮಗಳು ಯಂಗ್ಯಾಸೇನಿ ಬೆಹೆರಾ, ಧಾನೇಶ್ವರ್ ಸಾಹು, ಚಂದ್ರಮಣಿ ಸಾಹು, ಬೋಲನಾಥ್ ಜೆನಾ, ಸುರೇಂದ್ರ ದಾಸ್ ಮತ್ತು ಶರತ್ ಪಾಲ್ ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಆಟೋ ಚಾಲಕ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕಟಕ್ ನಲ್ಲಿರುವ ಎಸ್ ಸಿಬಿ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಎಸ್.ಕೆ.ಮಿಶ್ರಾ ತಿಳಿಸಿದ್ದಾರೆ.
ಇಂದು ಬೆಳಗ್ಗೆ ಆಟೋ ರಿಕ್ಷಾ ಕಟಕ್ ನ ನೇಮಾಲ್ ಮಠದಿಂದ ವಾಪಸ್ ಬರುತ್ತಿದ್ದ ವೇಳೆ ಬಾಲಿಕುಡದಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ