ಮಥುರಾ(ಉತ್ತರ ಪ್ರದೇಶ): ಇಲ್ಲಿನ ಮಕೆರಾ ಪ್ರದೇಶದಲ್ಲಿ ಚಲಿಸುತ್ತಿದ್ದ ಕಾರು ಕಾಲುವೆಗೆ ಬಿದ್ದ ಪರಿಣಾಮ ಹತ್ತು ಮಂದಿ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ.
ಯಾತ್ರಿಕರು ಕಾರಿನಲ್ಲಿ ಮೆಹಂದಿಪುರ್ ಬಾಲಾಜಿ ದೇವಸ್ಥಾನದಿಂದ ಮರಳುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದಿದೆ ಎಂದು ಆ ಭಾಗದ ಪೊಲೀಸ್ ಸೂಪರಿಂಟೆಂಡೆಂಟ್ ಆದಿತ್ಯ ಶುಕ್ಲಾ ತಿಳಿಸಿದ್ದಾರೆ.
ಎಂಟು ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಇನ್ನಿಬ್ಬರ ಶವ ಪತ್ತೆಗಾಗಿ ಹುಡುಕಾಟ ನಡೆಯುತ್ತಿದೆ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಶುಕ್ಲಾ ತಿಳಿಸಿದ್ದಾರೆ.
ಇನ್ನೊಂದೆಡೆ ಇಂದು ಮುಂಜಾನೆ ಪುಣೆಯಿಂದ ಲಾತೂರ್ ಗೆ ಪ್ರಯಾಣಿಸುತ್ತಿದ್ದ ಬಸ್ಸು ಬೀಡ್ ಎಂಬಲ್ಲಿ ಅಪಘಾತಕ್ಕೀಡಾಗಿ 9 ಮಂದಿ ಪ್ರಯಾಣಿಕರು ಮೃತರಾಗಿ 22 ಮಂದಿ ಗಂಭೀರ ಗಾಯಗೊಂಡಿದ್ದಾರೆ.
8 ಜನ ಸ್ಥಳದಲ್ಲಿಯೇ ಮೃತಪಟ್ಟರೆ ಇನ್ನೊಬ್ಬರು ಅಹ್ಮದ್ ನಗರ್ ಸರ್ಕಾರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಗಾಯಗೊಂಡವರನ್ನು ಅದೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ವಿವರಗಳು ಸಿಕ್ಕಿಲ್ಲ.