ಜೂನ್‌ 25–26ರಂದು ಪ್ರಧಾನಿ ಮೋದಿ ಅಮೆರಿಕ ಪ್ರವಾಸ

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಜೂನ್‌ 25–26ರಂದು ಅಮೆರಿಕ ಪ್ರವಾಸ ಕೈಗೊಳ್ಳುತ್ತಿದ್ದಾರೆ.
ನರೇಂದ್ರ ಮೋದಿ
ನರೇಂದ್ರ ಮೋದಿ
ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಜೂನ್‌ 25–26ರಂದು ಅಮೆರಿಕ ಪ್ರವಾಸ ಕೈಗೊಳ್ಳುತ್ತಿದ್ದಾರೆ. 
ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೋದಿ ಅವರು ಅಮೆರಿಕಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ.
ಈ ಹಿಂದೆ ದೂರವಾಣಿ ಮೂಲಕ ಸಂಭಾಷಣೆ ನಡೆಸಿದ್ದ ವೇಳೆ ತಮ್ಮ ದೇಶಕ್ಕೆ ಆಗಮಿಸುವಂತೆ ಮೋದಿ ಅವರಿಗೆ ಟ್ರಂಪ್ ಆಹ್ವಾನ ನೀಡಿದ್ದರು. ಡೊನಾಲ್ಡ್‌ ಟ್ರಂಪ್‌ ಅವರು ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಉಭಯ ನಾಯಕರು ಮೂರು ಬಾರಿ ದೂರವಾಣಿ ಮೂಲಕ ಸಂಭಾಷಣೆ ನಡೆಸಿದ್ದಾರೆ.
ಉಭಯ ದೇಶಗಳ ನಾಯಕರ ಭೇಟಿ ವೇಳೆ ಎಚ್‌1ಬಿ ವೀಸಾ, ಹವಾಮಾನ ಬದಲಾವಣೆಗೆ ಸಂಬಂಧಿಸಿದ ಪ್ಯಾರಿಸ್ ಒಪ್ಪಂದ ಮತ್ತಿತರ ವಿಷಯಗಳ ಬಗ್ಗೆ ಮಾತುಕತೆ ನಡೆಯುವ ಸಾಧ್ಯತೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com