ಭಾರತ-ಮ್ಯಾನ್ಮಾರ್ ಗಡಿಯಲ್ಲಿರುವ ಭದ್ರತೆ ಕುರಿತಂತೆ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಚರ್ಚೆ ನಡೆಸಲು ನಿನ್ನೆ ರಾಜನಾಥ ಸಿಂಗ್ ಅವರು ಮಿಜೋರಾಂನಲ್ಲಿರುವ ರಾಜಭವನಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸ್ಥಳಕ್ಕೆ ಬಂದಿರುವ 2 ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದರು. ಅಲ್ಲದೆ, ಬೀಫ್ ಪಾರ್ಟಿ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು.
ಇದರಂತೆ ಇಂದು ರಾಜನಾಥ ಸಿಂಗ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ವೇಳೆ ಮಿಜೋರಾಂನಲ್ಲಿ ನಡೆಸಲಾದ ಬೀಫ್ ಪಾರ್ಟಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಆಹಾರ ಅವರವರ ಆಯ್ಕೆಗೆ ಬಿಟ್ಟ ವಿಚಾರವಾಗಿದ್ದು, ಕೇಂದ್ರ ಸರ್ಕಾರ ಯಾರ ಮೇಲೆಯೂ ನಿರ್ಬಂಧ ಹೇರುವುದಿಲ್ಲ ಎಂದು ತಿಳಿಸಿದ್ದಾರೆ.