ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಸಿಆರ್ ಪಿಎಫ್ ಶಿಬಿರದ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ಇಬ್ಬರು ಯೋಧರಿಗೆ ಗಾಯವಾಗಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.
ಕಾಶ್ಮೀರದ ಪುಲ್ವಾಮ ಜಿಲ್ಲೆಯ ಟ್ರಾಲ್ ನಲ್ಲಿರುವ ಸಿಆರ್ ಪಿಎಫ್ ಶಿಬಿರದ ಬಳಿ ಬಂದಿರುವ ಉಗ್ರರು ಗ್ರೆನೇಡ್ ಗಳನ್ನು ಎಸೆದು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಇಬ್ಬರು ಯೋಧರಿಗೆ ಗಂಭೀರವಾದ ಗಾಯಗಳಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಉಗ್ರರು ದಾಳಿ ಹಿನ್ನಲೆಯಲ್ಲಿ ಸ್ಥಳದ ಸುತ್ತಲೂ ಸುತ್ತುವರೆದಿರುವ ಸೇನಾ ಪಡೆ ಉಗ್ರರನ್ನು ಸದೆಬಡಿಯಲು ಕಾರ್ಯಾಚರಣೆಯನ್ನು ಆರಂಭಿಸಿದೆ. ಕಾರ್ಯಾಚರಣೆ ವೇಳೆ ಗಡಿ ನಿಯಂತ್ರಣ ಬಳಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿರುವುದಾಗಿ ವರದಿಗಳು ತಿಳಿಸಿವೆ.