'ಟಾಯ್ಲೆಟ್ ಏಕ್ ಪ್ರೇಮ್ ಕಥಾ' ಚಿತ್ರ: ನಟ ಅಕ್ಷಯ್ ಕುಮಾರ್' ಕುರಿತು ಪ್ರಧಾನಿ ಮೋದಿ ಮೆಚ್ಚುಗೆ

ಸ್ವಚ್ಛ ಅಭಿಯಾನದಿಂದ ಪ್ರೇರಣೆಗೊಂಡು ನಿರ್ಮಿಸಲಾಗಿರುವ 'ಟಾಯ್ಲೆಟ್ ಏಕ್ ಪ್ರೇಮ್ ಕಥಾ ಚಿತ್ರ' ಕುರಿತಂತೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು...
ಬಾಲಿವುಡ್ ನಟ ಅಕ್ಷಯ್ ಕುಮಾರ್ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ
ಬಾಲಿವುಡ್ ನಟ ಅಕ್ಷಯ್ ಕುಮಾರ್ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ
ನವದೆಹಲಿ: ಸ್ವಚ್ಛ ಅಭಿಯಾನದಿಂದ ಪ್ರೇರಣೆಗೊಂಡು ನಿರ್ಮಿಸಲಾಗಿರುವ 'ಟಾಯ್ಲೆಟ್ ಏಕ್ ಪ್ರೇಮ್ ಕಥಾ ಚಿತ್ರ' ಕುರಿತಂತೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೊಂಡಿದ್ದಾರೆ. 
ಚಿತ್ರದ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಸ್ವಚ್ಛ ಭಾರತ ಅಭಿಯಾನದಿಂದ ಪ್ರೇರಣೆಗೊಂಡು ಟಾಯ್ಲೆಟ್ ಏಕ್ ಪ್ರೇಮ್ ಕಥಾ ಚಿತ್ರವನ್ನು ನಿರ್ಮಿಸಲಾಗಿದೆ. ಸ್ವಚ್ಛತೆ ಕುರಿತಂತೆ ಉತ್ತಮ ರೀತಿಯ ಸಂದೇಶವನ್ನು ರವಾನಿಸಲಾಗುತ್ತಿದೆ. ಇದು ಉತ್ತಮವಾದ ಶ್ರಮ. ಸ್ವಚ್ಛ ಭಾರತಕ್ಕಾಗಿ 125 ಕೋಟಿ ಜನರು ಕೂಡ ತಮ್ಮ ಕೈಜೋಡಿಸಿ ಕೆಲಸವನ್ನು ಮುಂದುವರೆಸಬೇಕು ಎಂದು ಹೇಳಿದ್ದಾರೆ.
 'ಟಾಯ್ಲೆಟ್:ಏಕ್ ಪ್ರೇಮ್ ಕಥಾ' (ಶೌಚಾಲಯ: ಒಂದು ಪ್ರೇಮಕಥೆ) ಸಿನಿಮಾ ಕುರಿತಂತೆ ಕೆಲ ದಿನಗಳ ಹಿಂದಷ್ಟೇ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಅಕ್ಷಯ್ ಕುಮಾರ್ ಅವರು ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ್ದರು. ಭೇಟಿ ಕುರಿತಂತೆ ಟ್ವೀಟ್ ಮಾಡಿದ್ದ ಅಕ್ಷಯ್ ಅವರು, ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದೆ ಮತ್ತು ನನ್ನ ಮುಂದಿನ ಸಿನೆಮಾ 'ಟಾಯ್ಲೆಟ್:ಏಕ್ ಪ್ರೇಮ್ ಕಥಾ' ಬಗ್ಗೆ ತಿಳಿಸುವ ಅವಕಾಶ ಸಿಕ್ಕಿತು. ಶೀರ್ಷಿಕೆ ಕೇಳಿದ ತಕ್ಷಣ ಅವರು ನಕ್ಕ ನಗು ಇಡೀ ದಿನ ಸಂಭ್ರಮಿಸುವಂತೆ ಮಾಡಿತು ಎಂದು ಹೇಳಿದ್ದರು. ಅಲ್ಲದೆ, ಮೋದಿಯವರ ಜೊತೆಗೆ ಚರ್ಚಿಸುತ್ತಿರುವ ಫೋಟೋವನ್ನೂ ಹಂಚಿಕೊಂಡಿದ್ದರು. 
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸ್ವಚ್ಛ ಭಾರತ ಅಭಿಯಾನದಿಂದ ಪ್ರೇರಣೆ ಪಡೆದು ನಟ ಅಕ್ಷಯ್ ಕುಕಮಾರ್ ಅವರು ಟಾಯ್ಲೆಟ್ ಏಕ್ ಪ್ರೇಮ್ ಕಥಾ ಚಿತ್ರವ್ನು ನಿರ್ಮಾಣ ಮಾಡಿದ್ದಾರೆ. ಈಗಾಗಲೇ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಟ್ರೇಲರ್ ಉತ್ತಮವಾರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಆಗಸ್ಟ್ 11 ರಂದು ಚಿತ್ರ ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com