ಅರುಣಾಚಲ ಪ್ರದೇಶ, ಮಿಜೋರಾಂನಲ್ಲಿ ನೆರೆ ಪ್ರವಾಹ: ನೆರವಿನ ಭರವಸೆ ನೀಡಿದ ಕೇಂದ್ರ ಸರ್ಕಾರ

ನೆರೆ ಪ್ರವಾಹಕ್ಕೆ ಸಹಾಯ ಹಸ್ತ ಚಾಚಲು ಮುಂದಾಗಿರುವ ಕೇಂದ್ರ ಸರ್ಕಾರ ಅರುಣಾಚಲ ಪ್ರದೇಶ ಮತ್ತು...
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು
ನವದೆಹಲಿ: ನೆರೆ ಪ್ರವಾಹಕ್ಕೆ ಸಹಾಯ ಹಸ್ತ ಚಾಚಲು ಮುಂದಾಗಿರುವ ಕೇಂದ್ರ ಸರ್ಕಾರ ಅರುಣಾಚಲ ಪ್ರದೇಶ ಮತ್ತು ಮಿಜೋರಾಂಗೆ ಎಲ್ಲಾ ರೀತಿಯ ನೆರವು ಒದಗಿಸುವುದಾಗಿ ಹೇಳಿದೆ.
ಕೇಂದ್ರ ಗೃಹ ಇಲಾಖೆ ರಾಜ್ಯ ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿ, ಅರುಣಾಚಲ ಪ್ರದೇಶ, ಮಿಜೋರಾಂ ಮತ್ತು ಇತರ ರಾಜ್ಯಗಳಲ್ಲಿನ ನೆರೆ ಪ್ರವಾಹ ಕುರಿತು ಗೃಹ ಸಚಿವಾಲಯ ನಿಗಾ ವಹಿಸುತ್ತಿದ್ದು ಕೇಂದ್ರ ಸರ್ಕಾರ ಅಗತ್ಯ ನೆರವು ಒದಗಿಸಲಿದೆ. ಕೇಂದ್ರ ಸರ್ಕಾರ ಈ ರಾಜ್ಯಗಳ ಜೊತೆ ನಿರಂತರ ಸಂಪರ್ಕದಲ್ಲಿರುತ್ತದೆ ಎಂದು ಭರವಸೆ ನೀಡಿದ್ದಾರೆ.
ರಾಜ್ಯ ಸರ್ಕಾರಗಳಿಗೆ ಎಲ್ಲಾ ರೀತಿಯ ನೆರವು ನೀಡಲು ಎಲ್ಲಾ ಅರೆ ಮಿಲಿಟರಿ, ಸೇನಾಪಡೆ, ಗಡಿ ರಸ್ತೆ ಪ್ರಾಧಿಕಾರ, ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ(ಎನ್ ಡಿಆರ್ಎಫ್)ಗಳು ಮುಂದೆ ಬರಲಿವೆ ಎಂದು ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವಾಲಯದ ನಿಯಂತ್ರಣ ಕೊಠಡಿ  ನಿರಂತರವಾಗಿ ಭೂ ಕುಸಿತ ಮತ್ತು ನೆರೆ ಪ್ರವಾಹದ ಪರಿಸ್ಥಿತಿಯ ನಿಗಾವಹಿಸುತ್ತಿದೆ. 
ಮಿಜೋರಾಂನ ಲುಂಗ್ಲೈ ಜಿಲ್ಲೆಯಲ್ಲಿ ಸಂಭವಿಸಿದ ನೆರೆ ಪ್ರವಾಹದಲ್ಲಿ ಕನಿಷ್ಠ 8 ಮಂದಿ ಮೃತಪಟ್ಟು, 6 ಮಂದಿ ಕಣ್ಮರೆಯಾಗಿದ್ದಾರೆ. ಸುಮಾರು 350 ಮನೆಗಳು ರಾಜ್ಯದ ವಿವಿಧ ಭಾಗಗಳಲ್ಲಿ ಪ್ರವಾಹಕ್ಕೆ ಮುಳುಗಿ ಹೋಗಿವೆ. ಕೃಷಿ ಭೂಮಿ ನಾಶವಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com