ಸಾನಿಯಾರ ಅಶ್ಲೀಲ ಫೋಟೋ ಪೋಸ್ಟ್: ಆರ್'ಜಿವಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಮೂಗುತ್ತಿ ಸುಂದರಿ, ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರ ಅಶ್ಲೀಲ ಫೋಟೋವನ್ನು ಬಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಇದೀಗ ಸಾಕಷ್ಟು...
ಟೆನಿಸ್ ತಾರೆ ಸಾನಿಯಾ ಮಿರ್ಜಾ ಹಾಗೂ ಬಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ
ಟೆನಿಸ್ ತಾರೆ ಸಾನಿಯಾ ಮಿರ್ಜಾ ಹಾಗೂ ಬಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ
Updated on
ಮುಂಬೈ: ಮೂಗುತ್ತಿ ಸುಂದರಿ, ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರ ಅಶ್ಲೀಲ ಫೋಟೋವನ್ನು ಬಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಇದೀಗ ಸಾಕಷ್ಟು ಆಕ್ರೋಶಗಳಿಗೆ ಕಾರಣವಾಗಿದೆ. 
ಇನ್'ಸ್ಟಾಗ್ರಾಮ್ ನಲ್ಲಿ ರಾಮ್ ಗೋಪಾಲ್ ವರ್ಮಾ ಅವರು ಸಾನಿಯಾ ಅವರ ಅಶ್ಲೀಲ ಫೋಟೋವನ್ನು ಪೋಸ್ಟ್ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆರ್ ಜಿವಿ ವಿರುದ್ಧ ಸಾಕಷ್ಟು ವಿರೋಧಗಳು ವ್ಯಕ್ತವಾಗತೊಡಗಿವೆ. 
ತಮ್ಮ ಕಿರು ಚಿತ್ರ 'ಮೇರಿ ಬೇಟಿ ಸನ್ನಿ ಲಿಯೋನ್ ಬನ್ ನಾ ಚಾಹ್ತೀ ಹೇ' ಪ್ರಚಾರಕ್ಕಾಗಿ ರಾಮ್ ಗೋಪಾಲ್ ವರ್ಮಾ ಅವರು ಉದಾಹರಣೆಯೊಂದನ್ನು ನೀಡುತ್ತ ಸಾನಿಯಾ ಅವರ ಅಶ್ಲೀಲ ಭಂಗಿಯ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಆರ್ ಜಿವಿ ಅವರ ಈ ವರ್ತನೆಗೆ ಇದೀಗ ವ್ಯಾಪಕ ಟೀಕೆಗಳು ವ್ಯಕ್ತವಾಗತೊಡಗಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com