ಕಾಶ್ಮೀರದಲ್ಲಿ ಸರಣಿ ಗ್ರೆನೇಡ್ ದಾಳಿ ನಡೆಸಿದ್ದು ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ: ಡಿಜಿಪಿ ವೈದ್

ಜಮ್ಮು ಮತ್ತು ಕಾಶ್ಮೀರದಲ್ಲಿ ಸರಣಿ ಗ್ರೆನೇಡ್ ದಾಳಿ ನಡೆಸಿದ್ದು ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ಎಂದು ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ಎಸ್.ಪಿ. ವೈದ್ ಅವರು ಬುಧವಾರ ಹೇಳಿದ್ದಾರೆ...
ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ಎಸ್.ಪಿ. ವೈದ್
ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ಎಸ್.ಪಿ. ವೈದ್
Updated on
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸರಣಿ ಗ್ರೆನೇಡ್ ದಾಳಿ ನಡೆಸಿದ್ದು ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ಎಂದು ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ಎಸ್.ಪಿ. ವೈದ್ ಅವರು ಬುಧವಾರ ಹೇಳಿದ್ದಾರೆ. 
ಈ ಕುರಿತಂತೆ ಮಾತನಾಡಿರುವ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಜ್ಬುಲ್-ಉಲ್-ಮುಜಾಹಿದ್ದೀನ್ ಉಗ್ರ ಸಂಘಟನೆಯ ಹೆಚ್ಚಾಗುತ್ತಿದೆ. ಆದರೆ, ಇತ್ತೀಚೆಗಷ್ಟೇ ನಡೆದ ಸರಣಿ ಗ್ರೆನೇಡ್ ದಾಳಿ ಹಿಂದೆ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ಇದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ ಎಂದು ಹೇಳಿದ್ದಾರೆ. 
ಗ್ರೆನೇಡ್ ದಾಳಿಯಿಂದ ನಷ್ಟಗಳೇನು ಸಂಭವಿಸಿಲ್ಲ. ಇಬ್ಬರು ಪೇದೆಗಳಿಗೆ ಹಾಗೂ 9 ಸಿಆರ್ ಪಿಎಫ್ ಯೋಧರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪ್ರಸ್ತುತ ಗಡಿಯಲ್ಲಿನ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ರಂಜಾನ್ ಸಂದರ್ಭದಲ್ಲಿ ಉಗ್ರರ ಚಟುವಟಿಕೆಗಳು ಹೆಚ್ಚಾಗುತ್ತವೆಂದು ತಿಳಿಸಿದ್ದಾರೆ. 
ಈ ಬಾರಿಯ ಅಮರನಾಥ ಯಾತ್ರೆಗೆ ಯಾವುದೇ ಸಮಸ್ಯೆಗಳು ಎದುರಾಗುವುದಿಲ್ಲ. ಭಕ್ತರು ಶಾಂತಿಯಿಂದ ಯಾತ್ರೆಯನ್ನು ಪೂರ್ಣಗೊಳಿಸಬಹುದು. ಈಗಾಗಲೇ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com