ಜುಲೈರೊಳಗೆ ರೈತರ ಸಾಲ ಮನ್ನಾ ಮಾಡಿ, ಇಲ್ಲವೇ ಕಠಿಣ ನಿರ್ಧಾರ ತೆಗೆದುಕೊಳ್ಳುತ್ತೇವೆ: ಬಿಜೆಪಿಗೆ ಠಾಕ್ರೆ ಎಚ್ಚರಿಕೆ
ಜುಲೈ ತಿಂಗಳೊಳಗಾಗಿ ಕೇಂದ್ರ ಸರ್ಕಾರ ರೈತರ ಸಾಲಗಳನ್ನು ಮನ್ನಾ ಮಾಡದಿದ್ದರೆ, ಬಿಜೆಪಿ ವಿರುದ್ಧ ಶಿವಸೇನೆ ಕಠಿಣ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಯವರು...
ಮುಂಬೈ: ಜುಲೈ ತಿಂಗಳೊಳಗಾಗಿ ಕೇಂದ್ರ ಸರ್ಕಾರ ರೈತರ ಸಾಲಗಳನ್ನು ಮನ್ನಾ ಮಾಡದಿದ್ದರೆ, ಬಿಜೆಪಿ ವಿರುದ್ಧ ಶಿವಸೇನೆ ಕಠಿಣ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಯವರು ಬುಧವಾರ ಹೇಳಿದ್ದಾರೆ.
ರೈತರ ಜೊತೆಗ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರೈತರ ಸಾಲ ಮನ್ನಾ ಮಾಡಲು ಕೇಂದ್ರ ಸರ್ಕಾರಕ್ಕೆ ನಾನು ಜುಲೈ ತಿಂಗಳವರೆಗೂ ಕಾಲಾವಕಾಶವನ್ನು ನೀಡುತ್ತಿದ್ದೇನೆ. ಒಂದು ವೇಳೆ ಸರ್ಕಾರ ರೈತರ ಸಾಲ ಮನ್ನಾ ಮಾಡದೇ ಹೋದಲ್ಲಿ ಬಿಜೆಪಿ ವಿರುದ್ಧ ಕಠಿಣ ನಿರ್ಧಾರ ತೆಗೆದುಕೊಳ್ಳುತ್ತೇವೆಂದು ಹೇಳಿದ್ದಾರೆ.
ರೈತರ ಸಾಲ ಸಂಪೂರ್ಣವಾಗಿ ಮನ್ನಾ ಮಾಡುವುದು ನಮಗೆ ಬೇಕು. ಹಸಿರು ಕ್ರಾಂತಿ ಬಗ್ಗೆ ನಾವು ಕೇಳಿದ್ದೆವು, ಆದರೆ, ಹಸಿರು ಕ್ರಾಂತಿಯನ್ನು ಸೃಷ್ಟಿಸುವವರೂ ಕೂಡ ಕ್ರಾಂತಿಯನ್ನು ಸೃಷ್ಟಿಸುತ್ತಾರೆಂಬುದನ್ನು ತೋರಿಸಿದ್ದಾರೆ ಎಂದು ತಿಳಿಸಿದ್ದಾರೆ.