ಇದಲ್ಲದೆ, ಕಾಶ್ಮೀರದಲ್ಲಿ ಉಗ್ರರು ಸರಣಿ ದಾಳಿಗಳನ್ನು ನಡೆಸುತ್ತಿದ್ದು, ಕಳೆದ ಮಂಗಳವಾರ ಏಕಕಾಲದಲ್ಲಿ ಮೂರು ಪ್ರದೇಶಗಳಲ್ಲಿ ದಾಳಿ ನಡೆಸಿದ್ದಾರೆ. ಮಂಗಳವಾರ ನಡೆದ ದಾಳಿಯಲ್ಲಿ ಒಟ್ಟು 7 ಗ್ರೆನೇಡ್ ದಾಳಿ ನಡೆಸಲಾಗಿದ್ದು, ದಾಳಿಯಲ್ಲಿ 14 ಪೊಲೀಸರು ಗಾಯಗೊಂಡಿದ್ದಾರೆ. ಅಲ್ಲದೆ, ಭದ್ರತಾ ಪಡೆಗಳಿಂದ ಉಗ್ರರು 4 ರೈಫಲ್ಸ್ ಗಳನ್ನು ಕಸಿದು ಪರಾರಿಯಾಗಿದ್ದಾರೆ.