ಬಿಹಾರ: ಉತ್ತರ ಪತ್ರಿಕೆ ಮರು ಮೌಲ್ಯಮಾಪನಕ್ಕೆ 3 ಲಕ್ಷ ದ್ವಿತೀಯ ಪಿಯು ವಿದ್ಯಾರ್ಥಿಗಳ ಅರ್ಜಿ

ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯು ಪರೀಕ್ಷೆ ಬರೆದ ವಿದ್ಯಾರ್ಥಿಗಳ ಪೈಕಿ 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ತರ ಪತ್ರಿಕೆ ಮರುಪರಿಶೀಲನೆಗೆ ಅರ್ಜಿ ಸಲ್ಲಿಸಿದ್ದಾರೆ.
ದ್ವಿತೀಯ ಪಿಯು ಪರೀಕ್ಷೆ (ಸಂಗ್ರಹ ಚಿತ್ರ)
ದ್ವಿತೀಯ ಪಿಯು ಪರೀಕ್ಷೆ (ಸಂಗ್ರಹ ಚಿತ್ರ)
ಪಾಟ್ನಾ: ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯು ಪರೀಕ್ಷೆ ಬರೆದ ವಿದ್ಯಾರ್ಥಿಗಳ ಪೈಕಿ 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ತರ ಪತ್ರಿಕೆ ಮರುಪರಿಶೀಲನೆಗೆ ಅರ್ಜಿ ಸಲ್ಲಿಸಿದ್ದಾರೆ. 
ಈ ವರ್ಷ ಅತಿ ಹೆಚ್ಚು ಸಂಖ್ಯೆಯಲ್ಲಿ ಅಂದರೆ ಪರೀಕ್ಷೆ ಬರೆದ ಒಟ್ಟು 12.6 ಲಕ್ಷ ವಿದ್ಯಾರ್ಥಿಗಳ ಪೈಕಿ 7.94 ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ. ಕಳಪೆ ಫಲಿತಾಂಶದ ಹಿನ್ನೆಲೆಯಲ್ಲಿ ಬಿಹಾರದಲ್ಲಿ ಪ್ರತಿಭಟನೆ ನಡೆದಿದ್ದು, ವಿದ್ಯಾರ್ಥಿಗಳು ಉತ್ತರ ಪತ್ರಿಕೆಯನ್ನು ಪುನಃ ಪರಿಶೀಲನೆ ನಡೆಸಲು ಅರ್ಜಿ ಸಲ್ಲಿಸಿದ್ದಾರೆ. ವಿಚಿತ್ರವೆಂದರೆ ಜೆಇಇ (ಮುಖ್ಯ ಪರೀಕ್ಷೆ)ಯಲ್ಲಿ ಅನೇಕ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಆದರೆ ದ್ವಿತೀಯ ಪಿಯು ಪರೀಕ್ಷೆಯಲ್ಲಿ ತೇರ್ಗಡೆಯಾಗಲು ವಿಫಲರಾಗಿದ್ದಾರೆ.
ಪ್ರತಿಭಟನೆ ನಡೆದಿರುವ ಹಿನ್ನೆಲೆಯಲ್ಲಿ ಫೇಲ್ ಆಗಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆ ಮರುಪರಿಶೀಲನೆಗೆ ಅರ್ಜಿ ಸಲ್ಲಿಸುವಂತೆ ಸಲಹೆ ನೀಡಿದ್ದಾರೆ. ಸಿಎಂ ಸಲಹೆಯಂತೆ ಉತ್ತರ ಪತ್ರಿಕೆ ಮರುಪರಿಶೀಲನೆಗೆ 3 ಲಕ್ಷಕ್ಕೂ ಹೆಚ್ಚು  ದ್ವಿತೀಯ ಪಿಯು ವಿದ್ಯಾರ್ಥಿಗಳ ಅರ್ಜಿ ಸಲ್ಲಿಸಿದ್ದಾರೆ. ಮರು ಮೌಲ್ಯಮಾಪನದ ಫಲಿತಾಂಶ ಜೂ.30 ರಂದು ಪ್ರಕಟವಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com