ಜಮ್ಮು-ಕಾಶ್ಮೀರ: ಉಗ್ರರು ಸೇನಾ ಪಡೆ ನಡುವೆ ಭಾರೀ ಗುಂಡಿನ ಚಕಮಕಿ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಉಗ್ರರು ಹಾಗೂ ಸೇನಾ ಪಡೆ ನಡುವೆ ಭಾರೀ ಗುಂಡಿನ ಚಕಮಕಿ ನಡೆಸುತ್ತಿರುವುದಾಗಿ ಶುಕ್ರವಾರ ತಿಳಿದುಬಂದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಉಗ್ರರು ಹಾಗೂ ಸೇನಾ ಪಡೆ ನಡುವೆ ಭಾರೀ ಗುಂಡಿನ ಚಕಮಕಿ ನಡೆಸುತ್ತಿರುವುದಾಗಿ ಶುಕ್ರವಾರ ತಿಳಿದುಬಂದಿದೆ. 
ನಿನ್ನೆಯಷ್ಟೇ ಶ್ರೀನಗರ ವಿಮಾನ ನಿಲ್ದಾಣದ ರಸ್ತೆಯಲ್ಲಿ ಪೊಲೀಸ್ ಗಸ್ತು ಪಡೆ ಮೇಲೆ ಗುಂಡಿನ ದಾಳಿ ನಡೆಸಿದ್ದ ಉಗ್ರರು ನಂತರ ಪರಾರಿಯಾಗಿದ್ದರು. ಉಗ್ರರ ದಾಳಿ ಬಳಿಕ ಸೇನಾ ಪಡೆ ಕಾರ್ಯಾಚರಣೆಗಿಳಿದಿತ್ತು.
ಇದರಂತೆ ಕುಲ್ಗಾಂ ಜಿಲ್ಲೆಯ ಅರ್ವಾನಿ ಗ್ರಾಮದಲ್ಲಿ ಉಗ್ರರು ಅಡಗಿ ಕುಳಿತಿರುವುದಾಗಿ ಮಾಹಿತಿಗಳು ತಿಳಿದುಬಂದ ಹಿನ್ನಲೆಯಲ್ಲಿ ಸೇನಾಪಡೆ ಕಾರ್ಯಾಚರಣೆಯನ್ನು ಚುರುಕುಗೊಳಿಸಿತ್ತು. 

ಈ ವೇಳೆ ಉಗ್ರರು ಇದ್ದಕ್ಕಿದ್ದಂತೆ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದೀಗ ಸೇನಾ ಎನ್ ಕೌಂಟರ್ ನಡೆಸಲು ಮುಂದಾಗಿದ್ದು, ಪ್ರಸ್ತುತ ಸ್ಥಳದಲ್ಲಿ ಉಗ್ರರು ಹಾಗೂ ಯೋಧರ ನಡುವೆ ಭಾರೀ ಗುಂಡಿನ ಚಕಮಕಿ ನಡೆಸುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. 

ಲಷ್ಕರ್-ಇ-ತೊಯ್ಬಾ (ಎಲ್ಇಟಿ) ಉಗ್ರ ಸಂಘಟನೆ 3-6 ಉಗ್ರರು ಅಡಗಿ ಕುಳಿತಿದ್ದಾರೆಂದು ಮೂಲಗಳು ತಿಳಿಸಿವೆ. 

ಒಂದೆಡೆ ಉಗ್ರರ ವಿರುದ್ದ ಸೇನಾಪಡೆ ಕಾರ್ಯಾಚರಣೆಗಿಳಿದಿದ್ದರೆ, ಮತ್ತೊಂದೆಡೆ ಕಾರ್ಯಾಚರಣೆಗೆ ವಿರೋಧ ವ್ಯಕ್ತಪಡಿಸಿರುವ ಕೆಲ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com