ನಿನ್ನೆ ಸಂಜೆ ರಸ್ತೆಯಲ್ಲಿ ನಿಂತಿದ್ದ ಭದ್ರತಾ ಸಿಬ್ಬಂದಿಗಳ ವಾಹನಗಳ ಮೇಲೆ ಗುಂಪೊಂದು ಇದ್ದಕ್ಕಿದ್ದಂತೆ ಕಲ್ಲು ತೂರಾಟ ನಡೆಸಿದೆ. ಈ ವೇಳೆ ಭದ್ರತಾ ಸಿಬ್ಬಂದಿಗಳು ಘರ್ಷಣೆ ಹತ್ತಿಕ್ಕುವ ಸಲುವಾಗಿ ಗುಂಡು ಹಾರಿಸಿದ್ದು, ಪರಿಣಾಮ 22 ವರ್ಷದ ಯುವಕನಿಗೆ ಗಂಭೀರವಾದ ಗಾಯವಾಗಿದೆ. ಕೂಡಲೇ ಯುವಕನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಯುವಕರ ಸಾವನ್ನಪ್ಪಿದ್ದಾರೆಂದು ಮೂಲಗಳು ತಿಳಿಸಿವೆ.