ಈ ಮಧ್ಯೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ತಮ್ಮ ಪಕ್ಷದ ಇಬ್ಬರು ಕಾರ್ಯಕರ್ತರು ಮೃತಪಟ್ಟಿದ್ದಾರೆ ಎಂದು ಗೋರ್ಖಾ ಜನ ಮುಕ್ತಿ ಮೋರ್ಚಾದ ಸಹಾಯಕ ಪ್ರಧಾನ ಕಾರ್ಯದರ್ಶಿ ಬಿನಯ್ ತಮಂಗ್ ಅವರು ಹೇಳಿದ್ದಾರೆ. ಆದರೆ ತಮಂಗ್ ಹೇಳಿಕೆಯನ್ನು ತಳ್ಳಿಹಾಕಿರುವ ಸಹಾಯಕ ಪೊಲೀಸ್ ಮಹಾ ನಿರ್ದೇಶಕ ಅನುಜ್ ಶರ್ಮಾ ಅವರು, ಪೊಲೀಸರು ಗೋಲಿಬಾರ್ ಮಾಡಿಲ್ಲ ಎಂದು ಹೇಳಿದ್ದಾರೆ.