ಕೊಚ್ಚಿ: ಕೇರಳದ ಮೊದಲ ಮೆಟ್ರೊ ಲೈನ್ ನ್ನು ಪ್ರಧಾನಿ ನರೇಂದ್ರ ಮೋದಿ ಜೂ.17 ರಂದು ಉದ್ಘಾಟಿಸಿದ್ದು, ಕೇರಳ ರಾಜ್ಯಪಾಲ ಪಿ ಸದಾಶಿವಂ, ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಹಾಗೂ ಮೆಟ್ರೋ ಮ್ಯಾನ್ ಎಂದೇ ಖ್ಯಾತಿ ಪಡೆದಿರುವ ಇ.ಶ್ರೀಧರನ್ ಅವರೊಂದಿಗೆ ಮೆಟ್ರೋದಲ್ಲಿ ಸಂಚರಿಸಿದ್ದಾರೆ.