ಗುವಾಹಟಿ: ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮೇಘಾಲಯದಲ್ಲಿ ಭೂಕುಸಿತ ಸಂಭವಿಸಿದ್ದು ಮೂವರು ಸಾವನ್ನಪ್ಪಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ.
ಸಿಲ್ಲಾಂಗ್ ನ ರಿ ಭೈ ಜಿಲ್ಲೆಯಲ್ಲಿ ಬೆಳಗ್ಗೆ 4:30ರಲ್ಲಿ ಭೂಕುಸಿತ ಸಂಭವಿಸಿದೆ. ಮನೆ ಮೇಲೆ ಭೂಕುಸಿತ ಸಂಭವಿಸಿದ್ದರಿಂದ ಮನೆಯಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಇನ್ನು ಇಬ್ಬರು ನಾಪತ್ತೆಯಾಗಿದ್ದಾರೆ.
ಇನ್ನು ಪೊಲೀಸರು ಸ್ಥಳೀಯರೊಂದಿಗೆ ಸೇರಿ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.