ಮಧ್ಯಪ್ರದೇಶದಲ್ಲಿ ಇಬ್ಬರು ರೈತರು ಆತ್ಮಹತ್ಯೆಗೆ ಶರಣು

ಮಧ್ಯಪ್ರದೇಶದಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರೆಸಿದ್ದು, ಸಾಲಬಾಧೆ ತಾಳಲಾರದೆ ಮತ್ತಿಬ್ಬರು ರೈತರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರ್ ಮತ್ತು ನರ್ಸಿಂಗ್ಪುರ ಜಿಲ್ಲೆಯಲ್ಲಿ ನಡೆದಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಭೋಪಾಲ್: ಮಧ್ಯಪ್ರದೇಶದಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರೆಸಿದ್ದು, ಸಾಲಬಾಧೆ ತಾಳಲಾರದೆ ಮತ್ತಿಬ್ಬರು ರೈತರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರ್ ಮತ್ತು ನರ್ಸಿಂಗ್ಪುರ ಜಿಲ್ಲೆಯಲ್ಲಿ ನಡೆದಿದೆ. 
ಕಳೆದ 24 ಗಂಟೆಗಳಲ್ಲಿ ಮತ್ತಿಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು ಇದರಂತೆ ರೈತರ ಒಟ್ಟು ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. 
ಮಧ್ಯಪ್ರದೇಶದ ಧಾರ್ ಮತ್ತು ನರ್ಸಿಂಗ್ಪುರ ಜಿಲ್ಲೆಗಳಲ್ಲಿ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಗಳು ತಿಳಿಸಿವೆ. 
ಧಾರ್ ಜಿಲ್ಲೆಯ ರಾಂಪುರ ಗ್ರಾಮದ ನಿವಾಸಿಯಾಗಿದ್ದ 40 ವರ್ಷದ ರೈತ ಜಗದೀಶ್ ಮೊರಿ ಎಂಬುವವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರಂತೆ ನರ್ಸಿಂಗ್ಪುರ ಜಿಲ್ಲೆಯ ಛಂದ್ಲೌನ್ ಗ್ರಾಮದ 50 ವರ್ಷದ ರೈತ ಇಮ್ರಾತ್ ಪಟೇಲ್ ಎಂಬುವವರು ಆತ್ಮಹತ್ಯೆಗೆ ಶರಣಾಗಿದ್ದಾರೆ. 
ರೈತರ ಸಾಲ ಮನ್ನಾ ಮಾಡುವಂತೆ ಈಗಾಗಲೇ ಮಧ್ಯಪ್ರದೇಶದಲ್ಲಿ ಸಾಕಷ್ಟು ಹೋರಾಟಗಳು ನಡೆಯುತ್ತಿದ್ದು, ಈ ನಡುವೆ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಮುಖ್ಯಮಂತ್ರಿ ಚೌಹಾಣ್ ಅವರ ಮೇಲಿನ ಒತ್ತಡ ಮತ್ತಷ್ಟು ಹೆಚ್ಚಾಗತೊಡಗಿದೆ. ವಿಪಕ್ಷಗಳೂ ಕೂಡ ಸರ್ಕಾರದ ವಿರುದ್ಧ ಸಾಕಷ್ಟು ಟೀಕೆ ಹಾಗೂ ವಿರೋಧಗಳನ್ನು ವ್ಯಕ್ತಪಡಿಸತೊಡಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com