ರಾಷ್ಟ್ರಪತಿ ಅಭ್ಯರ್ಥಿಯನ್ನು ಘೋಷಿಸಿ ನಂತರ ಬೆಂಬಲ ಕೇಳಿ: ಬಿಜೆಪಿಗೆ ಶಿವಸೇನೆ

ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿಗೆ ಬೆಂಬಲ ಕೇಳಿರುವ ಬಿಜೆಪಿಗೆ ಮಿತ್ರಪಕ್ಷ ಶಿವಸೇನೆ ಸ್ಪಷ್ಟ ಸಂದೇಶ ರವಾನೆ ಮಾಡಿದ್ದು, ರಾಷ್ಟ್ರಪತಿ ಅಭ್ಯರ್ಥಿಯನ್ನು ಘೋಷಣೆ ಮಾಡಿದ ಬಳಿಕ ಮಿತ್ರಪಕ್ಷಗಳ ಬೆಂಬಲ ಕೇಳುವಂತೆ ಹೇಳಿದೆ.
ಉದ್ದವ್‌ ಠಾಕ್ರೆ- ಅಮಿತ್ ಶಾ
ಉದ್ದವ್‌ ಠಾಕ್ರೆ- ಅಮಿತ್ ಶಾ
ಮುಂಬೈ: ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿಗೆ ಬೆಂಬಲ ಕೇಳಿರುವ ಬಿಜೆಪಿಗೆ ಮಿತ್ರಪಕ್ಷ ಶಿವಸೇನೆ ಸ್ಪಷ್ಟ ಸಂದೇಶ ರವಾನೆ ಮಾಡಿದ್ದು, ರಾಷ್ಟ್ರಪತಿ ಅಭ್ಯರ್ಥಿಯನ್ನು ಘೋಷಣೆ ಮಾಡಿದ ಬಳಿಕ ಮಿತ್ರಪಕ್ಷಗಳ ಬೆಂಬಲ ಕೇಳುವಂತೆ ಹೇಳಿದೆ.
ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಶಿವಸೇನಾ ಮುಖ್ಯಸ್ಥ ಉದ್ದವ್‌ ಠಾಕ್ರೆ ಅವರನ್ನು ಬಾಂದ್ರಾದ ಉಪನಗರದಲ್ಲಿ ನಿವಾಸದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್‌ ಷಾ ಭೇಟಿ ಮಾಡಿ ಮಾಡಿ ಚರ್ಚಿಸಿದ ವೇಳೆ, ಬಿಜೆಪಿ ಮೊದಲು ರಾಷ್ಟ್ರಪತಿ ಅಭ್ಯರ್ಥಿಯನ್ನು ಘೋಷಿಸಲಿ ನಂತರ ಬೆಂಬಲ ಕೆಳಲಿ ಎಂದು ಉದ್ಧವ್ ಠಾಕ್ರೆ ಹೇಳಿರುವುದಾಗಿ ತಿಳಿದುಬಂದಿದೆ. 
ಎನ್‌ಡಿಎ ಸರ್ಕಾರ ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆಯನ್ನು ಅಂತಿಮ ಗೊಳಿಸುವ ಮುನ್ನ ತನ್ನ ಮೈತ್ರಿಕೂಟವನ್ನು ಬಲಪಡಿಸುವಲ್ಲಿ ತೊಡಗಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಸೇನೆ ಬೆಂಬಲ ಪಡೆಯುವ ಉದ್ದೇಶದಿಂದ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪತಿ ಅಭ್ಯರ್ಥಿ ಯಾರು ಎಂಬುದನ್ನು ಪ್ರಕಟಿಸಲಿದ್ದಾರೆ. ಶಿವಸೇನೆ ತಮಗೆ ಬೆಂಬಲ ನೀಡುತ್ತದೆ ಎಂದು ಅಮಿತ್ ಶಾ ಭರವಸೆ ವ್ಯಕ್ತ ಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com