ನವದೆಹಲಿ: ವಿಮಾನದಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ಕಾಮುಕ ಸನ್ನೆ ತೋರಿಸಿದ 56 ವರ್ಷದ ವ್ಯಕ್ತಿಯನ್ನು ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಹೈದರಾಬಾದ್ ಮೂಲದ 44 ವರ್ಷದ ಮಹಿಳೆ ದೆಹಲಿಗೆ ತೆರಳಲು ವಿಮಾನವನ್ನೇರಿದ್ದರು. ಈ ಸಂದರ್ಭದಲ್ಲಿ ಸಹ ಪ್ರಯಾಣಿಕ ಕಾಮುಕ ಸನ್ನೆ ಮಾಡಿ ಕಿರುಕುಳ ನೀಡಲು ಆರಂಭಿಸಿದ್ದಾನೆ. ಆಗ ಮಹಿಳೆ ವಿಮಾನದ ಸಿಬ್ಬಂದಿಗೆ ವಿಷಯ ತಿಳಿಸಿದಾಗ ಪ್ರತ್ಯೇಕ ಸೀಟು ನೀಡಿದರು ಎಂದು ಪೊಲೀಸರು ತಿಳಿಸಿದ್ದಾರೆ.
ವಿಮಾನ ದೆಹಲಿಗೆ ತಲುಪಿದಾಗ ಮಹಿಳೆ ಪೊಲೀಸರಿಗೆ ದೂರು ನೀಡಿದರು. ವಿಚಾರಣೆ ನಡೆಸಿದ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ.