ಬಿಹಾರ ರಾಜ್ಯಪಾಲ ರಾಮನಾಥ್ ಕೋವಿಂದ್ ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ!

ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗಿದ್ದು, ಬಿಹಾರದ ರಾಜ್ಯಪಾಲರಾಗಿರುವ ರಾಮನಾಥ್ ಕೋವಿಂದ್ ಅವರನ್ನು ಎನ್ ಡಿಎ ರಾಷ್ಟ್ರಪತಿ...
ರಾಮ್ ನಾಥ್ ಕೋವಿಂದ್
ರಾಮ್ ನಾಥ್ ಕೋವಿಂದ್
ನವದೆಹಲಿ: ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗಿದ್ದು, ಬಿಹಾರದ ರಾಜ್ಯಪಾಲರಾಗಿರುವ ರಾಮನಾಥ್ ಕೋವಿಂದ್ ಅವರನ್ನು ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ. 
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿಯನ್ನು ಘೋಷಿಸಿದ್ದು, ರಾಮನಾಥ್ ಕೋವಿಂದ್ ರಾಷ್ಟ್ರಪತಿ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಿದ್ದಾರೆ. 
ರಾಮ್ ನಾಥ್ ಕೋವಿಂದ್ ಹಿನ್ನೆಲೆ 

ಉತ್ತರ ಪ್ರದೇಶದ ಖಾನ್ ಪುರದವರಾಗಿರುವ ರಾಮ್ ನಾಥ್ ಕೋವಿಂದ್ ಜನಿಸಿದ್ದು 1, 1945 ರಲ್ಲಿ. ಕಾನ್ಪುರ ವಿಶ್ವವಿದ್ಯಾನಿಲಯದಿಂದ ಬಿ.ಕಾಂ, ಎಲ್ಎಲ್ ಬಿ ಪದವೀಧರರಾಗಿರುವ ಕೋವಿಂದ್ 1994-2000 ಹಾಗೂ 2000-2006 ಅವಧಿಯಲ್ಲಿ ಉತ್ತರ ಪ್ರದೇಶದಿಂದ ಬಿಜೆಪಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಗೊಂಡಿದ್ದರು. ಪ್ರಸ್ತುತ ಬಿಹಾರ ರಾಜ್ಯಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com