ಬಿಜೆಪಿ ಸಂಸದೀಯ ಮಂಡಳಿ ಸಭೆ: ರಾಷ್ಟ್ರಪತಿ ಅಭ್ಯರ್ಥಿ ಅಂತಿಮಗೊಳಿಸುವ ಸಾಧ್ಯತೆ

ಬಿಜೆಪಿಯಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಅತ್ಯುನ್ನತ ಸಮಿತಿ ಸಂಸದೀಯ ಮಂಡಳಿ ಸಭೆ ಜೂ.19 ರಂದು ನಡೆಯಲಿದೆ.
ಬಿಜೆಪಿ
ಬಿಜೆಪಿ
ನವದೆಹಲಿ: ಬಿಜೆಪಿಯಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಅತ್ಯುನ್ನತ ಸಮಿತಿ ಸಂಸದೀಯ ಮಂಡಳಿ ಸಭೆ ಜೂ.19 ರಂದು ನಡೆಯಲಿದ್ದು, ತೀವ್ರ ಕುತೂಹಲ ಮೂಡಿಸಿರುವ ರಾಷ್ಟ್ರಪತಿ ಚುನಾವಣೆಯ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಇದೇ ಸಭೆಯಲ್ಲಿ ಎನ್ ಡಿಎ ಅಭ್ಯರ್ಥಿಯನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. 
ಸಂಸದೀಯ ಮಂಡಳಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭಾಗಿಯಾಗಲಿದ್ದು, ಇಂದೇ ರಾಷ್ಟ್ರಪತಿ ಅಭ್ಯರ್ಥಿಯ ಬಗ್ಗೆ ಅಧಿಕೃತ ಘೋಷಣೆಯಾಗಲಿದೆಯೇ ಎಂಬ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ರಾಜನಾಥ್ ಸಿಂಗ್, ವೆಂಕಯ್ಯ ನಾಯ್ಡು, ಅರುಣ್ ಜೇಟ್ಲಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com