ಆರ್ ಕೆ ನಗರ ಮತದಾರರಿಗೆ ಲಂಚ; ಕೇಸ್ ದಾಖಲಿಸಲಾಗಿದೆ: ತಮಿಳುನಾಡು ಸಿಎಂ

ಆರ್.ಕೆ.ನಗರ ಮತದಾರರಿಗೆ ಲಂಚ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ....
ಕೆ.ಪಳನಿಸ್ವಾಮಿ
ಕೆ.ಪಳನಿಸ್ವಾಮಿ
ಚೆನ್ನೈ: ಆರ್.ಕೆ.ನಗರ ಮತದಾರರಿಗೆ ಲಂಚ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಅವರು ಸೋಮವಾರ ವಿಧಾಸಭೆಗೆ ತಿಳಿಸಿದ್ದಾರೆ.
ಇಂದು ವಿಧಾನಸಭೆಯಲ್ಲಿ ಆರ್ ಕೆ ನಗರ ಮತದರಾರಿಗೆ ಲಂಚ ನೀಡಿದ ಆರೋಪಕ್ಕೆ ಸಂಬಂದಿಸಿದಂತೆ ಪ್ರತಿಪಕ್ಷದ ನಾಯಕ ಎಂ.ಕೆ.ಸ್ಟಾಲಿನ್ ಅವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಆರ್ ಕೆ ನಗರ ಉಪ ಚುನಾವಣೆ ವೇಳೆ ಮತದಾರರಿಗೆ ಲಂಚನ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಚೆನ್ನೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದು ತನಿಖೆ ನಡೆಯುತ್ತಿದೆ ಎಂದರು.
ಆದರೆ ಸಿಎಂ ಉತ್ತರ ನಮಗೆ ತೃಪ್ತಿ ತಂದಿಲ್ಲ ಎಂದು ಪ್ರತಿಪಕ್ಷಗಳ ಸದಸ್ಯರು, ಪಳನಿಸ್ವಾಮಿ ವಿರುದ್ಧ ಪ್ರತಿಭಟನೆ ನಡೆಸಿ ಸದನದಿಂದ ಹೊರ ನಡೆದರು.
ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ನಿಧನದಿಂದ ತೆರವಾದ ಆರ್ ಕೆ ನಗರ ವಿಧಾನಸಭಾ ಕ್ಷೇತ್ರಕ್ಕೆ ಕಳೆದ ಏಪ್ರಿಲ್ ನಲ್ಲಿ ಚುನಾವಣೆ ನಿಗದಿಯಾಗಿತ್ತು. ಆದರೆ ಮತದಾರರಿಗೆ ಮತ ಹಾಕಲು ವ್ಯಾಪಕ ಹಣ ಹಂಚಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಉಪ ಚುನಾವಣೆಯನ್ನು ರದ್ದುಗೊಳಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com