ನವದೆಹಲಿ: ಆದಾಯಕ್ಕಿಂತ ಅಧಿಕ ಆಸ್ತಿ ಪ್ರಕರಣ ಸಂಬಂಧ ಸಿಬಿಐ ಅಧಿಕಾರಿಗಳು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ಮನೆಗೆ ತೆರಳಿ ಪತ್ನಿಯನ್ನು ವಿಚಾರಣೆ ನಡೆಸಿದ್ದಾರೆ.
ಸತ್ಯೇಂದ್ರ ಜೈನ್ ಪತ್ನಿ ಸಮಯ ಕೋರಿರುವುದಾಗಿ ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಇದೇ ವೇಳೆ ಕೇಂದ್ರ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡರು ಆರೋಪಿಸಿದ್ದಾರೆ.
ಸಿಬಿಐ ಅನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಕೇಂದ್ರ ಸರ್ಕಾರ ದ್ವೇಷ ರಾಜಕೀಯ ಮಾಡುತ್ತಿದೆ ಎಂದು ಎಎಪಿ ಟ್ವೀಟ್ ಮಾಡಿದೆ.
ಸಚಿವ ಸತ್ಯೇಂದ್ರ ಜೈನ್ ವಿರುದ್ಧ ಸಿಬಿಐ ಪ್ರಾಥಮಿಕ ತನಿಖೆ ದಾಖಲಿಸಿಕೊಂಡಿದೆ. ಪ್ರಕರಣ ಸಂಬಂಧ ಇತ್ತೀಚೆಗೆ ಸಿಬಿಐ ಸಚಿವರನ್ನು ತನಿಖೆಗೊಳಪಡಿಸಿತ್ತು.
ಸತ್ಯೇಂದ್ರ ಜೈನ್ ಹಗರಣವೊಂದರಲ್ಲಿ ಭಾಗಿಯಾಗಿದ್ದಾರೆ ಎಂದು ಏಪ್ರಿಲ್ ನಲ್ಲಿ ಆರೋಪಿಸಲಾಗಿತ್ತು.ಈ ಹಿನ್ನೆಲೆಯಲ್ಲಿ ಪ್ರಾಥಮಿಕ ತನಿಖೆ ನಡೆಸಿರುವ ಸಿಬಿಐ ಪ್ರಕರಣ ಸಂಬಂಧ, ಸತ್ಯೇಂದ್ರ ಜೈನ್ ಮೇಲಿರುವ ಆರೋಪಗಳ ಬಗ್ಗೆ ಮಾಹಿತಿ ಸಂಗ್ರಹಿಸಿದೆ.
ಆದರೆ ತಮ್ಮ ವಿರುದ್ಧ ಮಾಡಿರುವ ಆರೋಪ ನಿರಾಧಾರ ಎಂದು ಸತ್ಯೇಂದ್ರ ಜೈನ್ ಹೇಳಿದ್ದಾರೆ, 2010-11 ರಲ್ಲಿ ಖಾಸಗಿ ಕಂಪನಿಗಳಿಂದ 11 ಕೋಟಿ ಗೂ ಹಣ ಪಡೆದಿದ್ದಾರೆ ಎನ್ನಲಾಗಿದೆ.