ಬಿಹಾರ ರಾಜ್ಯಪಾಲ ಹುದ್ದೆಗೆ ರಾಮನಾಥ್ ಕೋವಿಂದ್ ರಾಜಿನಾಮೆ

ಆಡಳಿತರೂಢ ಬಿಜೆಪಿ ನೇತೃತ್ವದ ಎನ್ ಡಿಎದ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ರಾಮನಾಥ್ ಕೋವಿಂದ್ ಅವರು....
ರಾಮನಾಥ್ ಕೋವಿಂದ್
ರಾಮನಾಥ್ ಕೋವಿಂದ್
Updated on: 
ಪಾಟ್ನಾ: ಆಡಳಿತರೂಢ ಬಿಜೆಪಿ ನೇತೃತ್ವದ ಎನ್ ಡಿಎದ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ರಾಮನಾಥ್ ಕೋವಿಂದ್ ಅವರು ಮಂಗಳವಾರ ಬಿಹಾರ ರಾಜ್ಯಪಾಲ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ.
ರಾಮನಾಥ್ ಕೋವಿಂದ್ ಅವರು ಜೂನ್ 23ರಂದು ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ಅವರು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ರಾಜಿನಾಮೆ ಸಲ್ಲಿಸಿದ್ದಾರೆ. ಕೋವಿಂದ್ ಅವರ ರಾಜಿನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ. ಅಲ್ಲದೆ ಪಶ್ಚಿಮ ಬಂಗಾಳ ರಾಜ್ಯಪಾಲ ಕೇಶರಿನಾಥ್ ತ್ರಿಪಾಠಿ ಅವರನ್ನು ಬಿಹಾರದ ಉಸ್ತುವಾರಿ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ.
ರಾಮನಾಥ್ ಕೋವಿಂದ್ ಅವರು ನಿನ್ನೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿ, ತಮ್ಮನ್ನು ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಕ್ಕೆ ಧನ್ಯವಾದ ಹೇಳಿದ್ದರು.
ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿರುವ ದಲಿತ ನಾಯಕ ರಾಮನಾಥ್ ಕೋವಿಂದ್ ಅವರಿಗೆ ಎನ್ ಡಿಎಯೇತರ ಪಕ್ಷಗಳಾದ ಬಿಜೆಡಿ, ಟಿಆರ್ಎಸ್ ವೈಎಸ್ ಆರ್ ಸಿಪಿ ಸಹ ಬೆಂಬಲ ಘೋಷಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com