ಹರ್ಯಾಣ: ಚಲಿಸುವ ಕಾರಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಹರ್ಯಾಣದ ಸೊಹ್ನಾ ಎಂಬಲ್ಲಿ ಚಲಿಸುತ್ತಿರುವ ಕಾರಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಸೊಹ್ನಾ(ಹರ್ಯಾಣ): ಹರ್ಯಾಣದ ಸೊಹ್ನಾ ಎಂಬಲ್ಲಿ ಚಲಿಸುತ್ತಿರುವ ಕಾರಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ನಂತರ ಗ್ರೇಟರ್ ನೊಯ್ಡಾದಲ್ಲಿ ಕಾರಿನಿಂದ ಬಿಸಾಕಿ ಆರೋಪಿಗಳು ಪರಾರಿಯಾದ ಘಟನೆ ನಿನ್ನೆ ರಾತ್ರಿ ನಡೆದಿದೆ.
ಹರ್ಯಾಣ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಆದರೆ ಇದುವರೆಗೆ ಎಫ್ಐಆರ್ ದಾಖಲಾಗಿಲ್ಲ.
ಮಹಿಳೆ ಗ್ರೇಟರ್ ನೊಯ್ಡಾದ ಕಸ್ನಾ ಪೊಲೀಸ್ ಠಾಣೆ ಹತ್ತಿರ ರಸ್ತೆ ಬದಿ ಬಿದ್ದಿದ್ದರು.
ಪ್ರಾಥಮಿಕ ತನಿಖೆ ಪ್ರಕಾರ, ಮಹಿಳೆ ಗುರುಗ್ರಾಮ್ ನವರಾಗಿದ್ದು, ನಿನ್ನೆ ರಾತ್ರಿ 8-8.30ರ ಸುಮಾರಿಗೆ ಸೊಹ್ನಾದಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಸ್ವಿಫ್ಟ್ ಕಾರಿನಲ್ಲಿ ಹೋಗುತ್ತಿದ್ದ ದುಷ್ಕರ್ಮಿಗಳ ಗುಂಪು ಕಾರಿನೊಳಗೆ ಮಹಿಳೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.
ಪೊಲೀಸರು ಇಂದು ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದಿದ್ದಾರೆ. ಸಂತ್ರಸ್ತೆ ನೀಡಿದ ಮಾಹಿತಿ ಆಧಾರದ ಮೇರೆಗೆ ಪ್ರಕರಣದ ತನಿಖೆ ನಡೆಸುತ್ತಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com