ಬ್ರೆಸೆಲ್ಸ್: ರೈಲು ನಿಲ್ದಾಣದಲ್ಲಿ ಸ್ಫೋಟ, ಶಂಕಿತ ಉಗ್ರನ ಹತ್ಯೆ

ಯುರೋಪ್ ನಲ್ಲಿ ಮತ್ತೊಂದು ಭಯೋತ್ಪಾದಕ ದಾಳಿ ನಡೆದಿದ್ದು, ರೈಲು ನಿಲ್ದಾಣದಲ್ಲಿ ಸ್ಫೋಟ ಸಂಭವಿಸಿದ ನಂತರ ಓರ್ವ ಶಂಕಿತ ಉಗ್ರನನ್ನು ಬ್ರೆಸೆಲ್ಸ್ ಸೈನಿಕರು ಹೊಡೆದುರುಳಿಸಿದ್ದಾರೆ.
ಬ್ರೆಸೆಲ್ಸ್
ಬ್ರೆಸೆಲ್ಸ್
ಬ್ರೆಸೆಲ್ಸ್: ಯುರೋಪ್ ನಲ್ಲಿ ಮತ್ತೊಂದು ಭಯೋತ್ಪಾದಕ ದಾಳಿ ನಡೆದಿದ್ದು, ರೈಲು ನಿಲ್ದಾಣದಲ್ಲಿ ಸ್ಫೋಟ ಸಂಭವಿಸಿದ ನಂತರ ಓರ್ವ ಶಂಕಿತ ಉಗ್ರನನ್ನು ಬ್ರೆಸೆಲ್ಸ್ ಸೈನಿಕರು ಹೊಡೆದುರುಳಿಸಿದ್ದಾರೆ.
ಪ್ರತ್ಯಕ್ಷದರ್ಶಿಗಳು ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಶಂಕಿತ ಉಗ್ರ ಅಲ್ಲಾಹು ಅಕ್ಬರ್ ಎಂದು ಕೂಗಿದ, ನಂತರ ಸ್ಫೋಟ ಸಂಭವಿಸಿತು ಎಂದು ತಿಳಿಸಿದ್ದಾರೆ. ದಾಳಿ ನಡೆಸಿದ ಉಗ್ರನ ಹತ್ಯೆಯನ್ನು ಹೊರತುಪಡಿಸಿ ಯಾವುದೇ ಪ್ರಾಣ ಹಾನಿಗಳು ಸಂಭವಿಸಿಲ್ಲ ಎಂದು ಬ್ರೆಸೆಲ್ಸ್ ನ ಅಧಿಕಾರಿಗಳು ತಿಳಿಸಿದ್ದಾರೆ. 
ಸ್ಫೋಟ ಸಂಭವಿಸುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಭದ್ರತಾ ಪಡೆಗಳು ಪ್ರಯಾಣಿಕರನ್ನು ಬೇರೆಡೆಗೆ ಸ್ಥಳಾಂತರಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com