ಕಾಶ್ಮೀರ ವಿಷಯದಲ್ಲಿ ಭಾರತ-ಪಾಕಿಸ್ತಾನದ ನಡುವೆ ವಿಶ್ವಸಂಸ್ಥೆ ಮಧ್ಯಸ್ಥಿಕೆ ವಹಿಸುವುದು ಬೇಡ. ದ್ವಿಪಕ್ಷೀಯ ಮಾತುಕತೆ ಮೂಲಕ ನಾವೇ ಸಮಸ್ಯೆಯನ್ನು ಪರಿಹರಿಸಿಕೊಳ್ಳುವುದಾಗಿ ವಿದೇಶಾಂಗ ಸಚಿವಾಲಯದ ವಕ್ತಾರ ಗೋಪಾಲ್ ಬಾಗ್ಲೆ ಅವರು ಹೇಳಿದ್ದಾರೆ.
ವಿಶ್ವಸಂಸ್ಥೆ ಮುಖ್ಯಸ್ಥ ಅಂಟೋನಿಯೊ ಗುಟೆರಸ್ ಅವರು ಕಾಶ್ಮೀರ ವಿಷಯದಲ್ಲಿ ಭಾರತ-ಪಾಕಿಸ್ತಾನದ ನಡುವೆ ಮಧ್ಯಸ್ಥಿಕೆ ವಹಿಸುತ್ತೇವೆ ಎಂದು ಹೇಳಿರುವುದಾಗಿ ಮಧ್ಯಮಗಳಲ್ಲಿ ವರದಿಯಾಗಿತ್ತು. ಈ ಹಿನ್ನಲೆಯಲ್ಲಿ ಬಾಗ್ಲೆ ಅವರು ನಮ್ಮ ಸಮಸ್ಯೆಯನ್ನು ಮಾತುಕತೆ ಮೂಲಕ ನಾವೇ ಪರಿಹರಿಸಿಕೊಳ್ಳುವುದಾಗಿ ಹೇಳಿದ್ದಾರೆ.
ವಿಶ್ವಸಂಸ್ಥೆಯಲ್ಲಿ ಜನವರಿ ನಂತರ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಂಟೋನಿಯೊ ಗುಟೆರಸ್ ಅವರು ಭಾರತ ಮತ್ತು ಪಾಕಿಸ್ತಾನದಲ್ಲಿ ಕಾಶ್ಮೀರ ಸಮಸ್ಯೆಯಿಂದಾಗಿ ದ್ವಿಪಕ್ಷೀಯ ಸಂಬಂಧ ಸಾಧಿಸಲು ಸಾಧ್ಯವಾಗುತ್ತಿಲ್ಲ ಈ ಹಿನ್ನೆಲೆಯಲ್ಲಿ ಮಧ್ಯ ಪ್ರವೇಶಿಸುವುದಾಗಿ ಹೇಳಿದ್ದರು.