ಸಾಲಮನ್ನಾ ಮಾಡುವುದು ಈಗ ಫ್ಯಾಶನ್ ಆಗುತ್ತಿದೆ: ವೆಂಕಯ್ಯ ನಾಯ್ಡು

ಸಾಲಮನ್ನಾ ಮಾಡುವುದು ಇಂದಿನ ದಿನಗಳಲ್ಲಿ ಫ್ಯಾಶನ್ ಆಗುತ್ತಿದೆ ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು...
ವೆಂಕಯ್ಯ ನಾಯ್ಡು
ವೆಂಕಯ್ಯ ನಾಯ್ಡು
ನವದೆಹಲಿ: ಸಾಲಮನ್ನಾ ಮಾಡುವುದು ಇಂದಿನ ದಿನಗಳಲ್ಲಿ ಫ್ಯಾಶನ್ ಆಗುತ್ತಿಗೆ ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು  ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ಪರಿಸ್ಥಿತಿ ತೀರಾ ಹದಗೆಟ್ಟಿದ್ದಾಗ ಮಾತ್ರ ಸಾಲ ಮನ್ನಾ ಮಾಡುವಂತ ಕ್ರಮ ಕೈಗೊಳ್ಳಬೇಕು ಆದರೆ ಸಾಲಮನ್ನಾ ಎಂಬುವುದು ಇತ್ತೀಚಿನ ದಿನಗಳಲ್ಲಿ ಫ್ಯಾಶನ್ ಆಗಿ ಪರಿವರ್ತಿತ ವಾಗುತ್ತಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ವ್ಯವಸ್ಥೆಯ ಬಗ್ಗೆ ಗಮನ ಹರಿಸಬೇಕು, ರೈತರಿಗೆ ತೊಂದರೆಯಾಗದಂತೆ ಕಾಳಜಿ ವಹಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ಇದೇ ವೇಳೆ ರಕ್ಷಣಾ ಇಲಾಖೆಗೆ ತಮ್ಮ ಭೂಮಿ ಸ್ವಾಧೀನ ಪಡಿಸಿಕೊಳ್ಳುತ್ತಿರುವುದನ್ನು ವಿರೋಧಿಸಿ ಥಾಣೆ-ಬದ್ಲಾಪುರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಾರಾಷ್ಟ್ರ ರೈತರು ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪರಿಸ್ಥಿತಿ ನಿಯಂತ್ರಿಸಲು ಸ್ಥಳದಲ್ಲಿ ಹೆಚ್ಚಿನ ಬಿಗಿ ಭದ್ರತೆ ಒದಗಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com