ವಾಜಪೇಯಿಯವರನ್ನು ಭೇಟಿ ಮಾಡಿದ ಎನ್ ಡಿ ಎ ರಾಷ್ಟ್ರಪತಿ ಅಭ್ಯರ್ಥಿ ಕೋವಿಂದ್

ಎನ್ ಡಿ ಎ ರಾಷ್ಟ್ರಪತಿ ಅಭ್ಯರ್ಥಿ ರಾಮ್ ನಾಥ್ ಕೋವಿಂದ್ ಗುರುವಾರ ಬಿಜೆಪಿ ಹಿರಿಯ ಮುಖಂಡ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಅವರ ಗೃಹದಲ್ಲಿ ಭೇಟಿಯಾಗಿದ್ದಾರೆ.
ರಾಮ್ ನಾಥ್ ಕೋವಿಂದ್
ರಾಮ್ ನಾಥ್ ಕೋವಿಂದ್
ನವದೆಹಲಿ: ಎನ್ ಡಿ ಎ ರಾಷ್ಟ್ರಪತಿ ಅಭ್ಯರ್ಥಿ ರಾಮ್ ನಾಥ್ ಕೋವಿಂದ್ ಗುರುವಾರ ಬಿಜೆಪಿ ಹಿರಿಯ ಮುಖಂಡ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಅವರ ಗೃಹದಲ್ಲಿ ಭೇಟಿಯಾಗಿದ್ದಾರೆ. 
ಜೂನ್ ೧೯ ರಂದು ೭೧ ವರ್ಷದ ರಾಮ್ ನಾಥ್ ಕೋವಿಂದ್ ಅವರನ್ನು ಎನ್ ಡಿ ಎ ರಾಷ್ಟ್ರಪತಿ ಅಭ್ಯರ್ಥಿಯೆಂದು ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಅಮಿತ್ ಷಾ ಘೋಷಿಸಿದ್ದರು. ರಾಮ್ ನಾಥ್ ಕೋವಿಂದ್ ವಾಯಪೇಯಿ ಅವರ ಕೃಷ್ಣ ಮೆನನ್ ಮಾರ್ಗದ ಗೃಹದಲ್ಲಿ ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ರಾಮ್ ನಾಥ್ ಕೋವಿಂದ್ ಅವರ ಪತ್ನಿ ಜೊತೆಗಿದ್ದರು ಎಂದು ತಿಳಿಯಲಾಗಿದೆ. 
ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಾಗಿ ಘೋಷಣೆಯಾದಾಗಿಲಿಂದಲೂ ರಾಮ್ ನಾಥ್ ಕೋವಿಂದ್ ಹಿರಿಯ ಬಿಜೆಪಿ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ. ಅವರು ಬುಧವಾರ ಬಿಜೆಪಿ ಹಿರಿಯ ಮುಖಂಡರಾದ ಎಲ್ ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರನ್ನು ಭೇಟಿಯಾಗಿದ್ದರು. 
ರಾಮ್ ನಾಥ್ ಕೋವಿಂದ್ ಶುಕ್ರವಾರ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದ್ದು ನಂತರ ಬೆಂಬಲಕ್ಕಾಗಿ ವಿರೋಧ ಪಕ್ಷದ ನಾಯಕರನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿದೆ. 
ರಾಷ್ಟ್ರಪತಿ ಚುನಾವಣೆ ಜುಲೈ೧೭ ರಂದು ನಡೆಯಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com