ವಿಶ್ವಸಂಸ್ಥೆ ಕಾಶ್ಮೀರ ಸಮಸ್ಯೆಗೆ ಮಧ್ಯಸ್ಥಿಕೆ ವಹಿಸುವ ಬದಲು ಜಿಹಾದ್ ಹೆಸರಿನಲ್ಲಿ ಪಾಕಿಸ್ತಾನ ನಡೆಸುತ್ತಿರುವ ಭಯೋತ್ಪಾದನೆಯನ್ನು ತಡೆಗಟ್ಟಲಿ ಎಂದು ಸ್ವಾಮಿ ಸಲಹೆ ನೀಡಿದ್ದಾರೆ. ವಿಶ್ವಸಂಸ್ಥೆ ಮುಖ್ಯಸ್ಥ ಅಂಟೊನಿಯೊ ಗುಟೆರಸ್ " ವಿಶ್ವಸಂಸ್ಥೆ ಕಾಶ್ಮೀರ ವಿಷಯದಲ್ಲಿ ಭಾರತ-ಪಾಕಿಸ್ತಾನದ ನಡುವೆ ಮಧ್ಯಸ್ಥಿಕೆ ವಹಿಸುವುದಾಗಿ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸುಬ್ರಹ್ಮಣಿಯನ್ ಸ್ವಾಮಿ ಕಾಶ್ಮೀರ ವಿಷಯದಲ್ಲಿ ಯುಎನ್ ಮಧ್ಯಸ್ಥಿಕೆ ಅನಗತ್ಯ ಎಂದಿದ್ದಾರೆ.