ಪೊಲೀಸ್ ಅಧಿಕಾರಿ ಹತ್ಯೆ ಪ್ರಕರಣ: ಭದ್ರತಾ ಪಡೆಗಳ ತಾಳ್ಮೆ ಪರೀಕ್ಷಿಸದಿರಿ- ಕಾಶ್ಮೀರಿಗಳಿಗೆ ಮುಫ್ತಿ ಎಚ್ಚರಿಕೆ

ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಲು ತೂರಾಟಗಾರರಿಗೆ ಎಚ್ಚರಿಕೆ ನೀಡುರುವ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರು...
ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ
ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ
ಶ್ರೀನಗರ: ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಲು ತೂರಾಟಗಾರರಿಗೆ ಎಚ್ಚರಿಕೆ ನೀಡುರುವ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರು ಭದ್ರತಾ ಪಡೆಗಳ ತಾಳ್ಮೆಯನ್ನು ಪರೀಕ್ಷಿಸಬೇಡಿ ಎಂದು ಶುಕ್ರವಾರ ಹೇಳಿದ್ದಾರೆ. 
ಪಂಡಿತ್ ಅವರ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಿ ಮಾತನಾಡಿರುವ ಅವರು, ಆಯೂಬ್ ಪಂಡಿತ್ ಅವರ ಹತ್ಯೆ ನಿಜಕ್ಕೂ ನಾಚಿಕೆಗೇಡಿನ ವರ್ತನೆಯಾಗಿದೆ. ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುವವರನ್ನೇ ಹತ್ಯೆ ಮಾಡಿದರೆ, ಇದಕ್ಕಿಂತ ನಾಚಿಕೆಗೇಡಿನವ ಕೆಲಸ ಬೇರೊಂದಿಲ್ಲ. ಕಲ್ಲು ತೂರಾಟಗಾರರ ವರ್ತನೆ ವಿಪರೀತವಾಗುತ್ತಿದ್ದು, ಭದ್ರತಾ ಸಿಬ್ಬಂದಿಗಳ ತಾಳ್ಮೆಯನ್ನು ಪರೀಕ್ಷಿಸುವ ಯತ್ನ ಮಾಡಬಾರದು ಎಂದು ಹೇಳಿದ್ದಾರೆ. 
ಸ್ವಂತ ಜನರೊಂದಿಗೆ ನಡೆದುಕೊಳ್ಳುವುದರ ಕುರಿತಂತೆ ಜಮ್ಮು ಮತ್ತು ಕಾಶ್ಮೀರ ಅತ್ಯಂತ ಸೂಕ್ಷ್ಮವಾಗಿ ನಡೆದುಕೊಳ್ಳುತ್ತಿದೆ. ಅತ್ಯಂತ ತಾಳ್ಮೆಯಿಂದ ವರ್ತಿಸುತ್ತಿದೆ. ಈ ತಾಳ್ಮೆಯನ್ನು ಇನ್ನೆಷ್ಟು ದಿನ ಮುಂದುವರೆಸಲು ಸಾಧ್ಯ? ಒಂದಲ್ಲ ಒಂದು ದಿನ ಭದ್ರತಾ ಪಡೆಗಳು ತಾಳ್ಮೆ ಕಳೆದುಕೊಳ್ಳುತ್ತಾರೆ. ಆಗ ಪರಿಸ್ಥಿತಿ ನಿಭಾಯಿಸುವುದು ಬಹಳ ಕಷ್ಟವಾಗಿ ಹೋಗುತ್ತದೆ.
ಸ್ಥಳೀಯ ನಾಗರಿಕರ ಜೀವ ರಕ್ಷಣೆಗಾಗಿ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಆದರೆ, ಜನರು ಇದೇ ರೀತಿಯ ವರ್ತನೆಯನ್ನು ಮುಂದುವರೆಸಿದ್ದೇ ಆದರೆ, ಹಿಂದಿನ ಪರಿಸ್ಥಿತಿಗಳು ಮರುಕಳಿಸಲಿದೆ ಎಂದು ಕಲ್ಲುತೂರಾಟಗಾರರಿಗೆ ಎಚ್ಚರಿಸಿದ್ದಾರೆ. 
ರಂಜಾನ್ ಪ್ರಾರ್ಥನೆ ಹಿನ್ನಲೆಯಲ್ಲಿ ಶ್ರೀನಗರ ಜಮಿಯಾ ಮಸೀದಿ ಬಳಿ ಆಯೂಬ್ ಪಂಡಿತ್ ಎಂಬ ಹಿರಿಯ ಪೊಲೀಸ್ ಅಧಿಕಾರಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಯ ಮೇಲೆ ಕಲ್ಲು ತೂರಾಟಗಾರರು ಮುಗಿಬಿದ್ದು, ಹಲ್ಲೆ ನಡೆಸಿ ಹತ್ಯೆ ಮಾಡಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com