ಕೇಂದ್ರ ಸರ್ಕಾರ ಈ ಬಾರಿ 40 ನಗರಗಳ ಪಟ್ಟಿಯನ್ನು ಘೋಷಿಸುವ ನಿರೀಕ್ಷೆ ಇತ್ತು. ಆದರೆ ಮುಂಬೈ ಹಾಗೂ ಬಂಗಾಳ ಸ್ಮಾರ್ಟಿ ಸಿಟಿ ನಗರಗಳನ್ನು ಪಡೆಯುವ ಪ್ರಕ್ರಿಯೆಯಲ್ಲಿ ಭಾಗವಹಿಸದೇ ಇರುವುದು ಹಾಗೂ ಕೆಲವು ನಗರಗಳು ಸ್ಮಾರ್ಟ್ ಸಿಟಿ ಪಟ್ಟಿಯಲ್ಲಿ ಸ್ಥಾನ ಪಡೆಯಲು ಇರಬೇಕಾದ ಕನಿಷ್ಠ ಅರ್ಹತೆಗಳನ್ನು ಹೊಂದಿರದ ಕಾರಣ ನಗರಗಳ ಸಂಖ್ಯೆ ಕಡಿಮೆಯಾಗಿದ್ದು, 30 ನಗರಗಳನ್ನು ಘೋಷಿಸಲಾಗಿದೆ. ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಸ್ಮಾರ್ಟ್ ಸಿಟಿ ನಗರಗಳ ಪಟ್ಟಿಯನ್ನು ಘೋಷಿಸಿದ್ದಾರೆ. ಈ ಮೂಲಕ ಸ್ಮಾರ್ಟ್ ಸಿಟಿ ನಗರಗಳ ಸಂಖ್ಯೆ 90 ಕ್ಕೆ ಏರಿಕೆಯಾಗಿದ್ದು, ಒಟ್ಟು 1,91,155 ಹೂಡಿಕೆಯಾಗಲಿದೆ.