ಗ್ರೇಟರ್ ನೊಯ್ಡಾದ ಜೆವರ್ ನಲ್ಲಿ ವಿಮಾನ ನಿಲ್ದಾಣ ಸ್ಥಾಪನೆ: ಪ್ರಸ್ತಾವನೆಗೆ ಕೇಂದ್ರ ಅನುಮೋದನೆ

ಗ್ರೇಟರ್ ನೊಯ್ಡಾದ ಜೆವರ್ ನಲ್ಲಿ ಹೊಸ ವಿಮಾನ ನಿಲ್ದಾಣವನ್ನು ಸ್ಥಾಪಿಸಲು ಪ್ರಸ್ತಾವನೆಗೆ ಸರ್ಕಾರ ಶನಿವಾರ ಅನುಮೋದನೆ...
ಜೆವರ್ ನ ವಿಮಾನ ನಿಲ್ದಾಣದ ಮಾರ್ಗ ಫಲಕ
ಜೆವರ್ ನ ವಿಮಾನ ನಿಲ್ದಾಣದ ಮಾರ್ಗ ಫಲಕ
ನವದೆಹಲಿ: ಗ್ರೇಟರ್ ನೊಯ್ಡಾದ ಜೆವರ್ ನಲ್ಲಿ ಹೊಸ ವಿಮಾನ ನಿಲ್ದಾಣವನ್ನು ಸ್ಥಾಪಿಸಲು ಪ್ರಸ್ತಾವನೆಗೆ ಸರ್ಕಾರ ಶನಿವಾರ ಅನುಮೋದನೆ ನೀಡಿದೆ ಎಂದು ಕೇಂದ್ರ ವಿಮಾನಯಾನ ಸಚಿವ ಅಶೋಕ್ ಗಜಪತಿ ರಾಜು ದೃಢಪಡಿಸಿದ್ದಾರೆ.
ನಾಗರಿಕ ವಿಮಾನಯಾನ ಸಚಿವಾಲಯದ ಪ್ರಕಾರ, ಗ್ರೇಟರ್ ನೊಯ್ಡಾದ ಜೆವರ್ ನಲ್ಲಿ ವಿಮಾನ ನಿಲ್ದಾದ ಮೊದಲ ಹಂತದ ಕಾಮಗಾರಿಗೆ ಸ್ಥಳವನ್ನು ನೀಡಲಾಗಿದ್ದು, ಇನ್ನು 5 ವರ್ಷಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದರು.
ಯೋಜನೆಯನ್ನು ವಿಸ್ತಾರವಾಗಿ ವಿವರಿಸಿದ ನಾಗರಿಕ ವಿಮಾನಯಾನ ರಾಜ್ಯ ಸಚಿವ ಜಯಂತ್ ಸಿನ್ಹಾ, ನೊಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತದ ಕಾಮಗಾರಿಗೆ ಸುಮಾರು 10,000 ವೆಚ್ಚವಾಗಲಿದೆ. ಉದ್ದೇಶಿತ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಸ ತಾಂತ್ರಿಕ ಮೌಲ್ಯಮಾಪನವನ್ನು ಉತ್ತರ ಪ್ರದೇಶ ಸರ್ಕಾರ ಕೋರಿದೆ. ಜುವರ್ ವಿಮಾನ ನಿಲ್ದಾಣದ ತಾಂತ್ರಿಕ ಮೌಲ್ಯಮಾಪನದ ಪ್ರಸ್ತಾವನೆಯನ್ನು ಯೋಗಿ ಆದಿತ್ಯನಾಥ್ ಸರ್ಕಾರ ಕಳುಹಿಸಿತ್ತು. 
ವಿಮಾನಯಾನ ದಟ್ಟಣೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ಎರಡನೇ ವಿಮಾನ ನಿಲ್ದಾಣ ಸ್ಥಾಪನೆಗೆ ಮಾತುಕತೆಗಳು ನಡೆಯುತ್ತಿವೆ.
ದೆಹಲಿಯಲ್ಲಿರುವ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿದಿನ ಸುಮಾರು 1,100 ವಿಮಾನಗಳು ಬಂದು ಹೋಗುತ್ತವೆ.  ಏರೋಡ್ರೋಮ್ ಸಾಮರ್ಥ್ಯವನ್ನು ಹೆಚ್ಚಿಸಲು ಯೋಜನೆಗಳು ನಡೆಯುತ್ತಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com