ನೌಶೆರಾ(ಜಮ್ಮು-ಕಾಶ್ಮೀರ): ಜಮ್ಮು-ಕಾಶ್ಮೀರದ ನೌಶೆರಾ ವಲಯದ ಗಡಿ ನಿಯಂತ್ರಣ ರೇಖೆ ಬಳಿ ಸಣ್ಣ ಶಸ್ತ್ರಾಸ್ತ್ರ, ಆಟೋಮ್ಯಾಟಿಕ್ಸ್ ಮತ್ತು ಮೊಟಾರ್ಸ್ ಗಳ ಅಪ್ರಚೋದಿತ ಗುಂಡಿನ ದಾಳಿಯನ್ನು ಪಾಕಿಸ್ತಾನ ಸೇನೆ ಇಂದು ಆರಂಭಿಸಿದೆ.
ಪಾಕಿಸ್ತಾನ ಸೇನೆಯ ದಾಳಿಗೆ ಭಾರತ ಸೇನೆ ಬಲವಾಗಿ ಮತ್ತು ಪರಿಣಾಮಕಾರಿಯಾಗಿ ಪ್ರತೀಕಾರ ನೀಡುತ್ತಿದೆ.
ಇಂದು ಬೆಳಗ್ಗೆ 6.30 ರ ಹೊತ್ತಿಗೆ ಪಾಕಿಸ್ತಾನ ಗುಂಡಿನ ದಾಳಿ ಆರಂಭಿಸಿತ್ತು.
ನಿನ್ನೆ ಪಾಕಿಸ್ತಾನ ಸೇನೆ ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿತ್ತು.