ರಾಷ್ಟ್ರಪತಿ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಮೀರಾಕುಮಾರ್ಗೆ ಜೆಡಿಎಸ್ ಬೆಂಬಲ!
ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಬೆಂಬಲಿತ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮೀರಾಕುಮಾರ್ ಅವರಿಗೆ ಜೆಡಿಎಸ್ ಭಾನುವಾರ ಅಧಿಕೃತವಾಗಿ ಬೆಂಬಲ ಸೂಚಿಸಿದೆ.
ಇಂದು ಬೆಳಗ್ಗೆ ಕಾಂಗ್ರೆಸ್ ಮುಖಂಡ ಗುಲಾಂನಬಿ ಅಜಾದ್ ಅವರು ಎಚ್ ಡಿ ದೇವೇಗೌಡ ಅವರಿಗೆ ಕರೆ ಮಾಡಿ ಮೀರಾ ಕುಮಾರ್ ಅವರಿಗೆ ಬೆಂಬಲ ನೀಡುವಂತೆ ಮನವಿ ಮಾಡಿರುವ ಹಿನ್ನಲೆಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಬೆಂಬಲ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಭಾನುವಾರ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮೀರಾಕುಮಾರ್ ಅವರ ನಾಮಪತ್ರಕ್ಕೆ ಸೂಚಕರಾಗಿ ಸಹಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಅಂತೆಯೇ ಕುಪೇಂದ್ರ ರೆಡ್ಡಿ, ಮಧು ಬಂಗಾರಪ್ಪ ಸೇರಿದಂತೆ ಜೆಡಿಎಸ್ ನ ಹಲವು ಸಂಸದ ಹಾಗೂ ಶಾಸಕರು ಮೀರಾ ಕುಮಾರ್ ಅವರಿಗೆ ಬೆಂಬಲಿಸಿ ಸಹಿ ಹಾಕಿದ್ದಾರೆ.
ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, "ಮೀರಾ ಕುಮಾರ್ ಅವರಿಗೆ ಬೆಂಬಲ ನೀಡುವಂತೆ ದೇವೇಗೌಡ ಅವರು ಪಕ್ಷದ ಶಾಸಕರಿಗೆ ಸೂಚನೆ ನೀಡಿದ್ದಾರೆ. ಮೀರಾ ಕುಮಾರ್ ಅವರಿಗೆ ಬೆಂಬಲಿಸುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಂ ನಬಿ ಆಜಾದ್ ದೇವೇಗೌಡ ಅವರೊಂದಿಗೆ ದೂರವಾಣಿಯಲ್ಲಿ ಮನವಿ ಮಾಡಿದ್ದರು" ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ