ಶ್ರೀನಗರ: ಈದ್ ಆಚರಣೆ ವೇಳೆ ಘರ್ಷಣೆ, ಹಿಂಸಾಚಾರ ಹತ್ತಿಕ್ಕಲು ಅಶ್ರುವಾಯು ಪ್ರಯೋಗ

ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರ ಸೇರಿದಂತೆ ಹಲವೆಡೆ ಈದ್ ಸಂಭ್ರಮಾಚರಣೆ ವೇಳೆ ಘರ್ಷಣೆ ಏರ್ಪಟ್ಟಿದ್ದು, ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗ ಮಾಡುತ್ತಿದ್ದಾರೆಂದು ಸೋಮವಾರ ತಿಳಿದುಬಂದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರ ಸೇರಿದಂತೆ ಹಲವೆಡೆ ಈದ್ ಸಂಭ್ರಮಾಚರಣೆ ವೇಳೆ ಘರ್ಷಣೆ ಏರ್ಪಟ್ಟಿದ್ದು, ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗ ಮಾಡುತ್ತಿದ್ದಾರೆಂದು ಸೋಮವಾರ ತಿಳಿದುಬಂದಿದೆ. 
ಶ್ರೀನಗರದಲ್ಲಿರುವ ಈದ್ಗಾ ಮೈದಾನ ಹೊರಾಂಗಣದಲ್ಲಿ ಘರ್ಷಣೆ ಏರ್ಪಟ್ಟಿದ್ದು, ಕೆಲ ಪ್ರದೇಶಗಳಲ್ಲಿ ಈದ್ ಪ್ರಾರ್ಥನೆಗೆ ಜಮ್ಮು ಮತ್ತು ಕಾಶ್ಮೀರ ಸರ್ಕಾರ ನಿರ್ಬಂಧ ಹೇರಿದೆ ಎಂದು ವರದಿಗಳು ತಿಳಿಸಿವೆ. 
ಸ್ಥಳೀಯರು ಪ್ರಾರ್ಥನೆ ಸಲ್ಲಿಸುವ ಸಲುವಾಗಿ ಮಸೀದಿಗೆ ತೆರಳಿದ್ದ ವೇಳೆ ಘರ್ಷಣೆ ಏರ್ಪಟ್ಟಿದೆ. ಈ ವೇಳೆ ಪ್ರತಿಭಟನಾಕಾರರು ಸ್ಥಳದಲ್ಲಿ ಕಲ್ಲು ತೂರಾಟ ಕೂಡ ನಡೆಸಿದ್ದಾರೆ. ಈ ಹಿನ್ನಲೆಯಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಭದ್ರತಾ ಪಡೆಗಳು ಹಾಗೂ ಪೊಲೀಸರು ಅಶ್ರುವಾಯು ಪ್ರಯೋಗ ಮಾಡಿದ್ದಾರೆಂದು ಹೇಳಲಾಗುತ್ತಿದೆ. ಘಟನೆಯಲ್ಲಿ 10 ಮಂದಿ ಗಾಯಗೊಂಡಿರುವುದಾಗಿ ಮೂಲಗಳು ತಿಳಿಸಿವೆ.
ಉತ್ತರ ಕಾಶ್ಮೀರದ ಅನಂತನಾಗ್ ಟೌನ್, ಸೋಪೋರ್, ಪಟ್ಟನ್ ನಲ್ಲೂ ಘರ್ಷಣೆ ಏರ್ಪಟ್ಟಿದ್ದು, ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆಂದು ವರದಿಗಳಾಗಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com