4 ತಿಂಗಳಿಂದ ಅಂಕಲ್‌ನಿಂದ ಅತ್ಯಾಚಾರ: ಸಾಯುವ ಮುನ್ನ ಪೊಲೀಸರಿಗೆ ಮೃತ ಬಾಲಕಿ ಹೇಳಿಕೆ

ನನ್ನ ತಂದೆಯ ಸ್ನೇಹಿತ(ಅಂಕಲ್) ಕಳೆದ ನಾಲ್ಕು ತಿಂಗಳಿನಿಂದ ನನ್ನ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿದ್ದಾರೆ ಎಂದು ಅಪ್ರಾಪ್ತ ಬಾಲಕಿಯೊಬ್ಬಳು ಸಾಯುವ...
ಅತ್ಯಾಚಾರ
ಅತ್ಯಾಚಾರ
ಗುರುಗ್ರಾಮ್: ನನ್ನ ತಂದೆಯ ಸ್ನೇಹಿತ(ಅಂಕಲ್) ಕಳೆದ ನಾಲ್ಕು ತಿಂಗಳಿನಿಂದ ನನ್ನ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿದ್ದಾರೆ ಎಂದು ಅಪ್ರಾಪ್ತ ಬಾಲಕಿಯೊಬ್ಬಳು ಸಾಯುವ ಮುನ್ನ ಪೊಲೀಸರಿಗೆ ಹೇಳಿಕೆ ನೀಡಿದ್ದಾಳೆ. 
17 ವರ್ಷದ ಅತ್ಯಾಚಾರ ಸಂತ್ರಸ್ತೆ ಕಳೆದ ನಾಲ್ಕು ತಿಂಗಳಿನಿಂದ ಅಂಕಲ್ ಹಲವು ಸಂದರ್ಭಗಳಲ್ಲಿ ನನ್ನ ಮೇಲೆ ರೇಪ್ ಮಾಡಿದ್ದಾರೆ. ಕಳೆದ ರಾತ್ರಿ ಸಹ ನನ್ನ ಮೇಲೆ ಅತ್ಯಾಚಾರ ನಡೆಸಿ ನನಗೆ ವಿಷ ಹಾಕಿದ್ದಾರೆ ಎಂದು ಸಂತ್ರಸ್ತ ಯುವತಿ ಹೇಳಿಕೆ ನೀಡಿ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. 
ಸಂತ್ರಸ್ತ ಯುವತಿ ಹೇಳಿಕೆ ಹಿನ್ನೆಲೆ ಆರೋಪಿಯನ್ನು ಬಂಧಿಸಲು ತೆರಳಿದ್ದ ಸಂದರ್ಭದಲ್ಲಿ ಆರೋಪಿ ಸಹ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆರೋಪಿಗೆ ನಾಲ್ಕು ಜನ ಮಕ್ಕಳಿದ್ದಾರೆ. ಅವರಲ್ಲಿ 15 ವರ್ಷದ ಯುವತಿಗೆ ತಂದೆಯಾಗಿರುವ ಆರೋಪಿಯು, ಸ್ನೇಹಿತನ ಮಗಳ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿ ಹೇಯ ಕೃತ್ಯವೆಸಗಿದ್ದಾನೆ ಎಂದು ಹೇಳಿದರು.
ಸದ್ಯ ಆರೋಪಿಗೆ ದೆಹಲಿಯ ಸಾಫ್ದರ್ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 302(ಕೊಲೆ), 506(ಕ್ರಿಮಿನಲ್ ಬೆದರಿಕೆ) ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದರು. 
ಕಳೆದ ಶನಿವಾರ ರಾತ್ರಿ ಸಂತ್ರಸ್ತ ಯುವತಿ ನಾಪತ್ತೆಯಾಗಿದ್ದಳು. ಮಾರನೇ ದಿನ ಬಂದ ಯುವತಿ ಅಂಕಲ್ ತನ್ನನ್ನು ಹೊರಗೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದು ಅಲ್ಲದೆ ನನಗೆ ವಿಷ ಹಾಕಿದ್ದಾರೆ ಎಂದು ಹೇಳಿಕೆ ನೀಡಿದ್ದಾಳೆ. ನಂತರ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆಕೆಯ ಸ್ಥಿತಿ ಗಂಭೀರವಾಗಿದ್ದರಿಂದ ಪೊಲೀಸರು ಆಕೆಯಿಂದ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com