ರಾಷ್ಟ್ರಪತಿ ಚುನಾವಣೆ ನಮಗೆ ಸಿದ್ಧಾಂತ, ತತ್ವಗಳ ಕದನವಾಗಿದೆ: ಸೋನಿಯಾ ಗಾಂಧಿ

ರಾಷ್ಟ್ರಪತಿ ಚುನಾವಣೆ ನಮಗೆ ಸಿದ್ಧಾಂತ ಹಾಗೂ ತತ್ವಗಳ ಕದನವಾಗಿದ್ದು, ಹೋರಾಟಕ್ಕೆ ವಿರೋಧ ಪಕ್ಷಗಳು ಸಿದ್ಧವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿಯವರು ಬುಧವಾರ...
ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ
ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ
ನವದೆಹಲಿ: ರಾಷ್ಟ್ರಪತಿ ಚುನಾವಣೆ ನಮಗೆ ಸಿದ್ಧಾಂತ ಹಾಗೂ ತತ್ವಗಳ ಕದನವಾಗಿದ್ದು, ಹೋರಾಟಕ್ಕೆ ವಿರೋಧ ಪಕ್ಷಗಳು ಸಿದ್ಧವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿಯವರು ಬುಧವಾರ ಹೇಳಿದ್ದಾರೆ.
ಪ್ರತಿಪಕ್ಷಗಳ ಅಭ್ಯರ್ಥಿ ಮೀರಾ ಕುಮಾರ್ ಅವರು ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಸೋನಿಯಾ ಗಾಂಧಿಯವರು, ಜುಲೈ.17 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆ ನಮಗೆ ಸಿದ್ಧಾಂತ, ಸತ್ಯ ಹಾಗೂ ತತ್ವಗಳ ಕದನವಾಗಿದ್ದು, ಹೋರಾಡಲು ವಿರೋಧ ಪಕ್ಷಗಳು ಸಿದ್ಧವಾಗಿವೆ ಎಂದು ಹೇಳಿದ್ದಾರೆ. 
ಮೀರಾ ಕುಮಾರ್ ಅವರು ನಾಮಪತ್ರ ಸಲ್ಲಿಕೆ ಮಾಡುತ್ತಿರುವ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿಯವರು, ವಿಭಜನೆಯ ಸಿದ್ಧಾಂತಗಳ ವಿರುದ್ದ ಮೀರಾ ಕುಮಾರ್ ಅವರಿದ್ದು, ಮೌಲ್ಯಗಳನ್ನು ಪ್ರತಿನಿಧಿಸುತ್ತಾರೆ. ಮೀರಾ ಕುಮಾರ್ ರಂತಹ ವ್ಯಕ್ತಿ ನಮ್ಮ ಅಭ್ಯರ್ಥಿಯಾಗಿರುವುದಕ್ಕೆ ನಮಗೆ ಹೆಮ್ಮೆಯಿದೆ ಎಂದು ತಿಳಿಸಿದ್ದಾರೆ. 
ರಾಷ್ಟ್ರಪತಿ ಚುನಾವಣೆ ಜುಲೈ.17ರಂದು ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದೆ. ಈ ಹಿನ್ನಲೆಯಲ್ಲಿ ಮೀರಾ ಕುಮಾರ್ ಅವರು ಇಂದು ಲೋಕಸಭಾ ಕಾರ್ಯದರ್ಶಿಯವರಿಗೆ ನಾಮಪತ್ರ ಸಲ್ಲಿಸಿದರು.  ಚುನಾವಣೆಯಲ್ಲಿ ಮೀರಾ ಕುಮಾರ್ ಮತ್ತು ಎನ್ ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರ ನಡುವೆ ನೇರ ಹಣಾಹಣಿ ನಿರೀಕ್ಷಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com