ದೇಶ
7 ನೇ ವೇತನ ಆಯೋಗದ ಶಿಫಾರಾಸ್ಸಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ
ಕೇಂದ್ರ ಸರ್ಕಾರಿ ಉದ್ಯೋಗಿಗಳ ಭತ್ಯೆಗಳಿಗೆ ಸಂಬಂಧಿಸಿದಂತೆ 7 ನೇ ವೇತನ ಆಯೋಗದ ಶಿಫಾರಸ್ಸಿಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.
ನವದೆಹಲಿ: ಕೇಂದ್ರ ಸರ್ಕಾರಿ ಉದ್ಯೋಗಿಗಳ ಭತ್ಯೆಗಳಿಗೆ ಸಂಬಂಧಿಸಿದಂತೆ 7 ನೇ ವೇತನ ಆಯೋಗದ ಶಿಫಾರಸ್ಸಿಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.
ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಕೇಂದ್ರ ಸಚಿವ ಅರುಣ್ ಜೇಟ್ಲಿ, 7 ನೇ ವೇತನ ಆಯೋಗದ ಶಿಫಾರಸ್ಸಿಗೆ ಕೇಂದ್ರ ಸಚಿವ ಸಂಪುಟ 34 ಮಾರ್ಪಾಡುಗಳನ್ನು ಮಾಡುವ ಮೂಲಕ ಒಪ್ಪಿಗೆ ಸೂಚಿಸಿದೆ ಎಂದು ತಿಳಿಸಿದ್ದಾರೆ.
ಸೈನಿಕರಿಗೂ ಭತ್ಯೆ ಹೆಚ್ಚಳ ಮಾಡಲಾಗಿದ್ದು, 14 ಸಾವಿರದಿಂದ -30 ಸಾವಿರ ರೂಪಾಯಿ ಏರಿಕೆ ಮಾಡಲಾಗಿದೆ. ಎಚ್ ಆರ್ ಎ ಇತರ ಭತ್ಯೆಗಳ ಶಿಫಾರಸ್ಸುಗಳು ಜುಲೈ 1 ರಿಂದ ಜಾರಿಗೆ ಬರಲಿವೆ. X, Y ಹಾಗೂ Z ನಗರಗಳಿಗೆ ಅನುಗುಣವಾಗಿ ತುಟ್ಟಿ ಭತ್ಯೆ ಏರಿಕೆ ಜಾರಿಗೊಳ್ಳಲಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ