ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಯೋಧರಿಗೆ ಗಾಯಗೊಂಡಿದ್ದಾರೆಂದು ಗುರುವಾರ ತಿಳಿದುಬಂದಿದೆ.
ಇಂದು ಬೆಳಗಿನ ಜಾವ 1.30ರ ಸುಮಾರಿಗೆ ಪೂಂಚ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರ ರೇಖೆ ಬಳಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡು ಹಾಗೂ ಶೆಲ್ ಗಳಿಂದ ದಾಳಿ ನಡೆಸಿದೆ ಎಂದು ರಕ್ಷಣಾ ಸಚಿವಾಲಯ ಮಾಹಿತಿ ನೀಡಿದೆ.
ಸಣ್ಣ ಶಸ್ತ್ರಾಸ್ತ್ರಗಳು, ಸ್ವಯಂಚಾಲಿತ ಶಸ್ತ್ರಾಸ್ತ್ರಗಳು, ಮಾರ್ಟರ್ ಗಳನ್ನು ಬಳಸಿ ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ ದಾಳಿ ನಡೆಸುತ್ತಿದ್ದು, ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ಸಚಿವಾಲಯ ತಿಳಿಸಿದೆ.
ಪ್ರಸ್ತುತ ಗಾಯಗೊಂಡಿರುವ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.