ಜಾರ್ಖಾಂಡ್' ಹತ್ಯೆ ಪ್ರಕರಣವನ್ನು ಧಾರ್ಮಿಕ ದೃಷ್ಟಿಕೋನದಲ್ಲಿ ನೋಡಬಾರದು: ವೆಂಕಯ್ಯ ನಾಯ್ಡು

ಗೋಮಾಂಸ ಸಾಗಣೆ ಮಾಡುತ್ತಿದ್ದಾನೆಂದು ಶಂಕಿಸಿ ಜಾರ್ಖಾಂಡ್ ನಲ್ಲಿ ನಡೆದ ಮುಸ್ಲಿಂ ವ್ಯಕ್ತಿ ಹತ್ಯೆ ಪ್ರಕರಣಕ್ಕೆ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು ತೀವ್ರ ಖಂಡನೆಯನ್ನು ವ್ಯಕ್ತಪಡಿಸಿದ್ದು, ಪ್ರಕರಣವನ್ನು ಧಾರ್ಮಿಕ ದೃಷ್ಟಿಕೋನದಲ್ಲಿ ನೋಡಬಾರದು...
ಕೇಂದ್ರ ಸಚಿವ ವೆಂಕಯ್ಯ ನಾಯ್ಡು
ಕೇಂದ್ರ ಸಚಿವ ವೆಂಕಯ್ಯ ನಾಯ್ಡು
ನವದೆಹಲಿ: ಗೋಮಾಂಸ ಸಾಗಣೆ ಮಾಡುತ್ತಿದ್ದಾನೆಂದು ಶಂಕಿಸಿ ಜಾರ್ಖಾಂಡ್ ನಲ್ಲಿ ನಡೆದ ಮುಸ್ಲಿಂ ವ್ಯಕ್ತಿ ಹತ್ಯೆ ಪ್ರಕರಣಕ್ಕೆ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು ತೀವ್ರ ಖಂಡನೆಯನ್ನು ವ್ಯಕ್ತಪಡಿಸಿದ್ದು, ಪ್ರಕರಣವನ್ನು ಧಾರ್ಮಿಕ ದೃಷ್ಟಿಕೋನದಲ್ಲಿ ನೋಡಬಾರದು ಎಂದು ಶುಕ್ರವಾರ ಹೇಳಿದ್ದಾರೆ. 
ಈ ಕುರಿತಂತೆ ಮಾತನಾಡಿರುವ ಅವರು, ಪ್ರತೀಯೊಬ್ಬರೂ ಖಂಡಿಸುವಂತಹ ಪ್ರಕರಣ ಇದಾಗಿದೆ. ಪ್ರಧಾನಮಂತ್ರಿಗಳೂ ಕೂಡ ಇದನ್ನು ಖಂಡಿಸುತ್ತಾರೆ. ದೇಶದ ಇತರೆ ಭಾಗಗಳಲ್ಲಿಯೂ ಈ ರೀತಿಯ ಘಟನೆಗಳು ನಡೆಯುತ್ತಿವೆ. ಇದು ನಿಜಕ್ಕೂ ನಾಚಿಕೆ ಪಡುವಂತಹ, ಅನಾರಿಕ ಹಾಗೂ ಕ್ರೂರ ವರ್ತನೆಯಾಗಿದೆ ಎಂದು ಹೇಳಿದ್ದಾರೆ. 
ಈ ರೀತಿಯ ಪ್ರಕರಣಗಳಿಗೆ ಧಾರ್ಮಿಕ ಬಣ್ಣವನ್ನು ನೀಡಬಾರದು. ಇಂತಹ ಘಟನೆಗಳು ಭವಿಷ್ಯದಲ್ಲಿ ಮರುಕಳಿಸದಂತೆ ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com