ಬೆಂಗಳೂರು-ಮುಂಬೈ ವಿಮಾನದಲ್ಲಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಯ ಬಂಧನ

ಬೆಂಗಳೂರಿನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ 31 ವರ್ಷದ ವ್ಯಕ್ತಿಯೊಬ್ಬ ತನ್ನ ಪಕ್ಕದಲ್ಲಿ ಕುಳಿತಿದ್ದ ಮಹಿಳೆಯೊಂದಿಗೆ ಅನುಚಿತವಾಗಿ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಮುಂಬೈ: ಬೆಂಗಳೂರಿನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ 31 ವರ್ಷದ ವ್ಯಕ್ತಿಯೊಬ್ಬ ತನ್ನ ಪಕ್ಕದಲ್ಲಿ ಕುಳಿತಿದ್ದ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಲ್ಲದೆ ಆಕೆಯ ಫೋಟೋ ಕ್ಲಿಕ್ಕಿಸಿದ ಆರೋಪದ ಮೇಲೆ ಶುಕ್ರವಾರ ಬಂಧಿಸಲಾಗಿದೆ.
ಇಂದು ಬೆಳಗ್ಗೆ 6.15ಕ್ಕೆ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಆದ ವಿಮಾನ 7.45ಕ್ಕೆ ಮುಂಬೈ ತಲುಪಿದೆ. ಪ್ರಯಾಣದ ಮಧ್ಯ ಸಬೀನ್ ಹಮ್ಜಾ ಎಂಬ ವ್ಯಕ್ತಿ ತನ್ನ ಪಕ್ಕದಲ್ಲಿ ಕುಳಿತು ನಿದ್ರಿಸುತ್ತಿದ್ದ ಮಹಿಳೆಯನ್ನು ಅನುಚಿತವಾಗಿ ಮುಟ್ಟಿದ್ದಾನೆ. ಎಚ್ಚೆತ್ತುಕೊಂಡ ಮಹಿಳೆ ವ್ಯಕ್ತಿ ಹಸ್ತಮೈಥುನ ಮಾಡಿಕೊಳ್ಳುವುದನ್ನು ನೋಡಿದ್ದಾಳೆ. ಕೂಡಲೇ ಮಹಿಳೆ ಅಲರಾಂ ಬಾರಿಸಿದ್ದು, ಸ್ಥಳಕ್ಕೆ ಧಾವಿಸಿದ ವಿಮಾನದ ಸಿಬ್ಬಂದಿ ಸಬೀನ್ ನನ್ನು ಇಡೀದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಮುಂಬೈ ವಿಮಾನ ನಿಲ್ದಾಣ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಅಲರಾಂ ಬಾರಿಸಿದ ನಂತರ ವಿಮಾನದ ಸಿಬ್ಬಂದಿ ಮಹಿಳೆಯ ಸಹಾಯಕ್ಕೆ ಧಾವಿಸಿದಾಗ ಸಬೀನ್ ತನ್ನ ಪ್ಯಾಂಟ್ ಜಿಪ್ ಹಾಕಿಕೊಳ್ಳುತ್ತಿರುವುದನ್ನು ಗಮನಿಸಿದ್ದಾರೆ.
ಭದ್ರತಾ ಸಿಬ್ಬಂದಿ ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಿಕೊಂಡಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿಲಾಗಿದೆ. ವಿಚಾರಣೆ ನಡೆಸಿಕ ಕೋರ್ಟ್ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com